ಶನಿವಾರ, ಏಪ್ರಿಲ್ 17, 2021
22 °C

15ರಂದು ಉದ್ಯೋಗ ಮೇಳ: ನೋಂದಣಿ ಶಿಬಿರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ವಿಶ್ವ ಕೌಶಲ ದಿನಾಚರಣೆಯ ಪ್ರಯುಕ್ತ ಜುಲೈ 15ರಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 3ರ ತನಕ ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಉದ್ಯೋಗ ಮೇಳ ನಡೆಯಲಿದೆ.

ಉದ್ಯೋಗ ಮೇಳದಲ್ಲಿ 10ರಿಂದ 15 ಖಾಸಗಿ ಸಂಸ್ಥೆಗಳು ಭಾಗವಹಿಸಿ, ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿವೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ವಾಹನ ಚಾಲನ ಪರವಾನಗಿ ಹಾಗೂ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

ಮೇಳದಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ನೀಡಲಾಗುವ ಸೌಲಭ್ಯಗಳು ಉಚಿತವಾಗಿದ್ದು, ಯಾವುದೇ ಶುಲ್ಕ ಪಾವತಿಸುವಂತಿಲ್ಲ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

ಉದ್ಯೋಗ ನೋಂದಣಿ ಶಿಬಿರ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜುಲೈ 18ರಂದು ಸೋಮವಾರಪೇಟೆ ತಾಲ್ಲೂಕು ಕೊಡ್ಲಿಪೇಟೆ ಪ್ರಥಮ ದರ್ಜೆ ಕಾಲೇಜು, ಜುಲೈ 23ರಂದು ಯಡೂರು ಬಿಟಿಜಿಸಿ, ಪ್ರಥಮ ದರ್ಜೆ ಕಾಲೇಜು ಹಾಗೂ ಜುಲೈ 25ರಂದು ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉದ್ಯೋಗ ನೋಂದಣಿ ಶಿಬಿರ ನಡೆಯಲಿದೆ ಅರ್ಹ ಅಭ್ಯರ್ಥಿಗಳು ದಾಖಲಾತಿ ನೀಡಬಹುದಾಗಿದೆ ಪ್ರಕಟಣೆ ತಿಳಿಸಿದೆ. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.