‘ಎನ್‌ಸಿಸಿಯಿಂದ ವ್ಯಕ್ತಿತ್ವ ರೂಪಿಸಿಕೊಳ್ಳಿ’

ಗುರುವಾರ , ಜೂಲೈ 18, 2019
28 °C
ಎನ್‌ಸಿಸಿಗೆ ಸೇರ್ಪಡೆಗೆ ಕಮಾಂಡಿಂಗ್ ಅಧಿಕಾರಿ ಕರ್ನಲ್ ವಿ.ಎನ್. ನಾಯಕ್ ಸಲಹೆ

‘ಎನ್‌ಸಿಸಿಯಿಂದ ವ್ಯಕ್ತಿತ್ವ ರೂಪಿಸಿಕೊಳ್ಳಿ’

Published:
Updated:
Prajavani

ಮಡಿಕೇರಿ: ವಿದ್ಯಾರ್ಥಿಗಳು ಎನ್‌ಸಿಸಿ ಸೇರುವ ಮೂಲಕ ತಮ್ಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಮುಂದಾಗಬೇಕು ಎಂದು ಎನ್‌ಸಿಸಿಯ 19 ಕರ್ನಾಟಕ ಬೆಟಾಲಿಯನ್‌ನ ಕಮಾಂಡಿಂಗ್ ಅಧಿಕಾರಿ ಕರ್ನಲ್ ವಿ.ಎನ್.ನಾಯಕ್ ತಿಳಿಸಿದರು.

ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನು ಎನ್‌ಸಿಸಿಗೆ ಸೇರ್ಪಡೆಗೊಳಿಸುವ ನಿಟ್ಟಿನಲ್ಲಿ ನಡೆದ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಎನ್‌ಸಿಸಿ ತನ್ನದೇ ಆದ ಮೌಲ್ಯ ಹಾಗೂ ಮಹತ್ವ ಹೊಂದಿದೆ. ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಎನ್‌ಸಿಸಿ ಸೇರುವ ಮೂಲಕ ತಮ್ಮ ವ್ಯಕ್ತಿತ್ವವನ್ನು ಉತ್ತಮಪಡಿಸಿಕೊಳ್ಳುವಂತಾಗಬೇಕು. ಶಿಸ್ತಿನೊಂದಿಗೆ ಅಭ್ಯಾಸ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಮಯ ವ್ಯರ್ಥ ಮಾಡದೇ ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದುವ ಮೂಲಕ ಜೀವನ ರೂಪಿಸಿಕೊಕೊಳ್ಳಬೇಕು ಎಂದು ಹೇಳಿದರು.

ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್‌ಸಿಸಿ ಅಧಿಕಾರಿ ಮೇಜರ್ ಡಾ.ರಾಘವ್ ಮಾತನಾಡಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಎನ್‌ಸಿಸಿಗೆ ಸೇರಬೇಕಿದೆ. ಎನ್‌ಸಿಸಿ ಜೀವನದಲ್ಲಿ ಶಿಸ್ತು, ಸಮಯ ಪಾಲನೆ, ದೇಶಪ್ರೇಮಗಳನ್ನು ವಿದ್ಯಾರ್ಥಿಗಳಿಗೆ ಸಹಕಾರಿಯಾಗಿದೆ ಎಂದು ತಿಳಿಸಿದರು.

1949 ಎನ್‌ಸಿಸಿ ಆರಂಭವಾಯಿತು. ವಿದ್ಯಾರ್ಥಿ ಜೀವನದಲ್ಲೇ ಎನ್‌ಸಿಸಿಗಳಲ್ಲಿ ಸೇರಿದ್ದವರು ಉನ್ನತ ಸ್ಥಾನಗಳಲ್ಲಿ ಸಾಕಷ್ಟು ಮಂದಿ ಇದ್ದಾರೆ. ಹಾಗಾಗಿ, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಎನ್‌ಸಿಸಿಗೆ ಸೇರ್ಪಡೆಗೊಳ್ಳಬೇಕು ಎಂದು ಮನವಿ ಮಾಡಿದರು.

ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಟಿ.ಡಿ.ತಿಮ್ಮಯ್ಯ ಮಾತನಾಡಿ, ನವೀಕರಣಗೊಂಡಿರುವ ನೂತನ ಕಟ್ಟಡ ನಿರ್ಮಾಣಕ್ಕೆ ಸಹಕರಿಸಿದ ರಾಜ್ಯ ಸರ್ಕಾರ ಹಾಗೂ ಲೋಕೋಪಯೋಗಿ ಇಲಾಖೆ ಸೇವೆಯನ್ನು ಅಭಿನಂದಿಸಿದರು. 

ನೂತನ ಕಟ್ಟಡವು ಎನ್‌ಸಿಸಿ ಕೆಡೆಟ್‌ಗಳಿಗೆ ಹೆಚ್ಚಿನ ಅನುಕೂಲವಾಗಲಿದ್ದು, ಉತ್ತಮ ತರಬೇತಿ ನೀಡಲು ಸಹಕಾರಿಯಾಗಿದೆ. ಕಟ್ಟಡ ಉತ್ತಮ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !