ಮಡಿಕೇರಿ: ಚಿತ್ರನಟಿ ಹರ್ಷಿಕಾ ಪೂಣಚ್ಚ ಜತೆಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಬನ್ಸಿ ನಾಣಯ್ಯ ಎಂಬಾತನನ್ನು ಪೊಲೀಸರುಶುಕ್ರವಾರ ಬಂಧಿಸಿದ್ದಾರೆ.

ಮತ್ತೊಬ್ಬ ಆರೋಪಿ ಬಿಪಿನ್ ದೇವಯ್ಯ ತಲೆಮರೆಸಿಕೊಂಡಿದ್ದಾನೆ.

ತಾಲ್ಲೂಕಿನ ನೀರುಕೊಲ್ಲಿಯ ರೆಸಾರ್ಟ್‌ನಲ್ಲಿ ಗುರುವಾರ ರಾತ್ರಿ ನಡೆದ ಸಂಬಂಧಿಯೊಬ್ಬರ ನಿಶ್ಚಿತಾರ್ಥದಲ್ಲಿ ಪಾಲ್ಗೊಳ್ಳಲು ನಟ ಭುವನ್ ಜತೆಯಲ್ಲಿ ಹರ್ಷಿಕಾ ಬಂದಿದ್ದರು. ಆಗ ಈ ಆರೋಪಿಗಳಿಬ್ಬರೂ ಹರ್ಷಿಕಾಗೆ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ.

ಅದನ್ನು ಪ್ರಶ್ನಿಸಿದ್ದ ಭುವನ್ ಮೇಲೆಯೂ ಹಲ್ಲೆ ನಡೆಸಲಾಗಿದೆ. ಗಾಯಗೊಂಡಿದ್ದ ಭುವನ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹರ್ಷಿಕಾ ಪೂಣಚ್ಚ ಅವರೊಂದಿಗೆ ಬೆಂಗಳೂರಿಗೆ ತೆರಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.