ಕಾರ್ಮಿಕರಿಗಾಗಿ ವಿವಿಧ ಸ್ಪರ್ಧೆ

ಮಂಗಳವಾರ, ಮೇ 21, 2019
24 °C
ಕಾರ್ಮಿಕರ ದಿನದ ಅಂಗವಾಗಿ ಆಯೋಜಿಸಿದ್ದ ಕ್ರೀಡಾಕೂಟ

ಕಾರ್ಮಿಕರಿಗಾಗಿ ವಿವಿಧ ಸ್ಪರ್ಧೆ

Published:
Updated:
Prajavani

ಪೊನ್ನಂಪೇಟೆ: ಸಂಸ್ಥೆಯು ಕಾರ್ಮಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು, ಪ್ರತಿ ವರ್ಷ ಕಾರ್ಮಿಕರ ದಿನಾಚರಣೆ ಅಂಗವಾಗಿ ತಪ್ಪದೆ ಕ್ರೀಡಾಕೂಟ ಆಯೋಜಿಸಿಕೊಂಡು ಬರುತ್ತಿದೆ ಎಂದು ಟಾಟಾ ಕಾಫಿ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕ ಕೆ.ಜಿ ರಾಜೀವ್ ಅಭಿಪ್ರಾಯಪಟ್ಟರು.

ಪಾಲಿಬೆಟ್ಟದ ಟಾಟಾ ಕಾಫಿ ಮೈದಾನದಲ್ಲಿ ಕಾರ್ಮಿಕರ ದಿನದ ಅಂಗವಾಗಿ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ತೋಟಗಳಲ್ಲಿ ವನ್ಯಮೃಗಗಳ ಹಾವಳಿ ಹೆಚ್ಚಾಗಿರುವ ಕಾರಣ ಕಾರ್ಮಿಕರು ಎಚ್ಚರದಿಂದ ಕೆಲಸ ಮಾಡಬೇಕಿದೆ. ವರ್ಷವಿಡೀ ದುಡಿಯುವ ಕಾರ್ಮಿಕ ವರ್ಗಕ್ಕೆ ಮನರಂಜನೆ ನೀಡುವ ಉದ್ದೇಶದಿಂದ ಕ್ರೀಡೋತ್ಸವವನ್ನು ನಡೆಸಿಕೊಂಡು ಬರಲಾಗುತ್ತಿದೆ ಎಂದು ಹೇಳಿದರು.

ಕ್ರೀಡಾಜ್ಯೋತಿಯನ್ನು ಬೆಳಗುವ ಮೂಲಕ ಹಿರಿಯ ಪ್ರಧಾನ ವ್ಯವಸ್ಥಾಪಕ ಎಂ.ಬಿ ಗಣಪತಿ ಕಾರ್ಮಿಕರ ದಿನಾಚರಣೆಗೆ ಚಾಲನೆ ನೀಡಿದರು. ವಿವಿಧ ಭಾಗಗಳಿಂದ ಬಂದಿದ್ದ ಕಾರ್ಮಿಕರು ‌ಪಥಸಂಚಲನ ನಡೆಸಿದರು.

ಕ್ರೀಡಾಕೂಟದಲ್ಲಿ ಗೋಣಿಚೀಲ ಓಟ, ಮಡಕೆ ಹೊತ್ತು ಓಟ, ಮೂರು ಕಾಲಿನ ಓಟ, ಹಗ್ಗಜಗ್ಗಾಟ ಗಮನಸೆಳೆದವು.

ಕ್ರೀಡಾ ಸಂಚಾಲಕ ಕಿರಣ್ ಮಾಧವನ್ ಹಾಗೂ ಕ್ರೀಡಾ ಸಲಹೆಗಾರ ಸಿ.ಯು ಅಶೋಕ್ ಇದ್ದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !