ಭಾನುವಾರ, ಸೆಪ್ಟೆಂಬರ್ 19, 2021
28 °C
ಭಗೀರಥ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತ್ಯುತ್ಸವ

ಸತತ ಪ್ರಯತ್ನದಿಂದ ಸಾಧನೆ ಸಾಧ್ಯ: ಅನೀಸ್ ಕಣ್ಮಣಿ ಜಾಯ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಡಿಕೇರಿ: ಜಿಲ್ಲಾಡಳಿತದಿಂದ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಸೋಮವಾರ ಭಗೀರಥ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತ್ಯುತ್ಸವವು ಆಚರಿಸಲಾಯಿತು.

ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಾತನಾಡಿ, ಸತತ ಪ್ರಯತ್ನ ಪಟ್ಟಾಗ ಯಾವುದೇ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಲು ಸಾಧ್ಯ. ಆ ನಿಟ್ಟಿನಲ್ಲಿ ಭಗೀರಥ ಪ್ರಯತ್ನ ಅಗತ್ಯ’ ಎಂದು ಪ್ರತಿಪಾದಿಸಿದರು.  

ಭಗೀರಥ ಅವರು ಶ್ರದ್ಧೆ, ಕಠಿಣ ಶ್ರಮದಿಂದ ಇತರರಿಗೆ ಮಾದರಿಯಾಗಿ ಬದುಕು ನಡೆಸಿದರು. ಇವರ ಆದರ್ಶವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಗುಡೂರು ಭೀಮಸೇನ ಮಾತನಾಡಿ, ಶತಮಾನಗಳ ಹಿಂದೆ ರಾಜರಾಗಿ ಆಡಳಿತ ನಡೆಸಿದ ಭಗೀರಥರ ಕಠಿಣ ತಪಸ್ಸು ಇತರರಿಗೆ ಮಾದರಿ. ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ಪ್ರತಿಭೆಯಿದ್ದು, ಭಗೀರಥರಂತೆ ಪ್ರಯತ್ನಪಟ್ಟಾಗ ಮಾತ್ರ ಯಶಸ್ಸು ಸಾಧಿಸಬಹುದು. ಇದಕ್ಕೆ ಉತ್ತಮ ಉದಾಹರಣೆ ಭಗೀರಥರೇ ಎಂದು ತಿಳಿಸಿದರು.

ಹೇಮರೆಡ್ಡಿ ಮಲ್ಲಮ್ಮ ಅವರ ಜೀವನ ಸರ್ವರಿಗೂ ಅನುಕರಣೀಯವಾದದ್ದು. ಅವರ ಸರಳತೆ, ಶಿವಭಕ್ತಿಯಿಂದ ಸಮಾಜದಲ್ಲಿನ ನಾನಾ ಸಮಸ್ಯೆಗಳನ್ನು ಪರಿಹರಿಸಿದರು ಮತ್ತು ಜನರಲ್ಲಿ ಅಧ್ಯಾತ್ಮ ಭಾವನೆ ಮೂಡಿಸಿದರು ಎಂದು ತಿಳಿಸಿದರು.

ಹೇಮರೆಡ್ಡಿ ಮಲ್ಲಮ್ಮ ಅವರ ಜೀವನ ಸರ್ವರಿಗೂ ಅನುಕರಣೀಯವಾದದ್ದು. ಅವರ ಸರಳತೆ, ಶಿವಭಕ್ತಿಯಿಂದ ಸಮಾಜದಲ್ಲಿನ ನಾನಾ ಸಮಸ್ಯೆಗಳನ್ನು ಪರಿಹರಿಸಿದರು ಮತ್ತು ಜನರಲ್ಲಿ ಅಧ್ಯಾತ್ಮ ಭಾವನೆ ಮೂಡಿಸಿದರು ಎಂದು ತಿಳಿಸಿದರು.

‘ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರು ಲೋಕ ಕಲ್ಯಾಣಕ್ಕಾಗಿ ತಮ್ಮ ಜೀವನ ಮುಡಿಪಾಗಿಟ್ಟು ಬಡವರ ಉದ್ಧಾರಕ್ಕಾಗಿ ಶ್ರಮಿಸಿದರು. ಸಮಾಜದಲ್ಲಿ ಅವರನ್ನು ಅನುಕರಣೆ ಮಾಡುವಂತ ವ್ಯಕ್ತಿತ್ವವನ್ನು ರೂಪಿಸಿಕೊಂಡಿದ್ದರು. ಬಡವರು, ಭಿಕ್ಷುಕರಿಗೆ ದಾನ–ಧರ್ಮ ಮಾಡುವುದರಲ್ಲಿ ಮುಂದೆ ಇದ್ದು ಶಿವ ಭಕ್ತಿಯಿಂದ ಪ್ರಸಿದ್ಧಿಯಾಗಿದ್ದರು ಎಂದು ವಿವರಿಸಿದರು.

ಜಿಲ್ಲಾ ಪಂಚಾಯಿತಿ ಸಿಇಒ ಕೆ. ಲಕ್ಷ್ಮಿಪ್ರಿಯಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಕೆ.ಟಿ. ದರ್ಶನ್ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು