ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

7ರಂದು ಜಿಲ್ಲಾಮಟ್ಟದ ಟೇಬಲ್ ಟೆನಿಸ್‌ ಪಂದ್ಯಾವಳಿ

Last Updated 2 ಆಗಸ್ಟ್ 2019, 14:20 IST
ಅಕ್ಷರ ಗಾತ್ರ

ಮಡಿಕೇರಿ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖಾ ವತಿಯಿಂದ ಜಿಲ್ಲಾ ಮಟ್ಟದ ಟೇಬಲ್ ಟೆನಿಸ್‌ ಪಂದ್ಯಾವಳಿಯು ಆಗಸ್ಟ್ 7ರಂದು ಬೆಳಿಗ್ಗೆ 10ಕ್ಕೆ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯಲಿದೆ.

ಟೇಬಲ್ ಟೆನಿಸ್ ಪಂದ್ಯಾವಳಿ 14 ವರ್ಷಕ್ಕೆ ಒಳಪಟ್ಟ ಬಾಲಕ/ ಬಾಲಕಿಯರಿಗೆ ಹಾಗೂ 18 ವರ್ಷ ಒಳಪಟ್ಟ ಪುರುಷರಿಗೆ ಮತ್ತು ಮಹಿಳೆಯರಿಗಾಗಿ ಸಿಂಗಲ್ಸ್ ಮತ್ತು ಡಬಲ್ಸ್ ಟೇಬಲ್ ಟೆನ್ನಿಸ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ.

ಟೆಬಲ್ ಟೆನಿಸ್‌ ಆಟಗಾರರು ಟಿ.ಟಿ. ಬ್ಯಾಟ್ ಅನ್ನು ತಾವೇ ತರತಕ್ಕದ್ದು. ಭಾಗವಹಿಸುವ ಕ್ರೀಡಾಪಟುಗಳಿಗೆ ಯಾವುದೇ ರೀತಿಯ ಪ್ರವೇಶ ಶುಲ್ಕ ಇರುವುದಿಲ್ಲ. ಆಗಸ್ಟ್ 6ರೊಳಗೆ ಕಚೇರಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು.

ಈ ಪಂದ್ಯಾವಳಿಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಹೆಚ್ಚಿನ ಮಾಹಿತಿಗೆ ಕಚೇರಿಯ ದೂರವಾಣಿ: 08272– 228985 ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT