ಜಿಲ್ಲಾ ಯುವಜನ ಮೇಳ: ಹೆಸರು ನೋಂದಣಿಗೆ ಮನವಿ

7

ಜಿಲ್ಲಾ ಯುವಜನ ಮೇಳ: ಹೆಸರು ನೋಂದಣಿಗೆ ಮನವಿ

Published:
Updated:

ಮಡಿಕೇರಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಯುವ ಒಕ್ಕೂಟದ ಆಶ್ರಯದಲ್ಲಿ ಜ.20ರಂದು ಜಿಲ್ಲಾ ಯುವಜನ ಮೇಳ ನಡೆಯಲಿದ್ದು, ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವವರು ತಮ್ಮ ಹೆಸರು ನೋಂದಣಿ ಮಾಡಿಕೊಳ್ಳುವಂತೆ ಯುವ ಒಕ್ಕೂಟದ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಪಿ.ಸುಕುಮಾರ್ ಕೋರಿದ್ದಾರೆ.

ಗಾಳಿಬೀಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಯುವಜನ ಮೇಳ ನಡೆಯಲಿದೆ. ಯುವಕ, ಯುವತಿಯರಿಗೆ ಪ್ರತ್ಯೇಕವಾಗಿ ಸ್ಪರ್ಧೆ ಆಯೋಜಿಸಲಾಗಿದೆ. ಭಾವಗೀತೆ, ಗೀಗಿಪದ, ಲಾವಣಿ, ಕೋಲಾಟ, ರಂಗಗೀತೆ, ಜನಪದ ನೃತ್ಯ, ಜನಪದ ಗೀತೆ, ರಾಗಿ ಜೋಳ ಬೀಸುವ ಒನಕೆ ಪದ, ಸೋಬಾನೆ, ಭಜನೆ, ಏಕಪಾತ್ರಾಭಿನ ಸ್ಪರ್ಧೆ ಏರ್ಪಡಿಸಲಾಗಿದೆ.

ಸ್ಪರ್ಧಿಗಳು ಅಂದು ಬೆಳಿಗ್ಗೆ 10ರ ಒಳಗೆ ಸ್ಥಳದಲ್ಲಿ ಹಾಜರಿರಬೇಕು. ಮಾಹಿತಿಗಾಗಿ ಮೊ. 94812 13920, 94497 59029 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಕೋರಿದ್ದಾರೆ.

ವೈಯಕ್ತಿಕ ವಿಭಾಗದಲ್ಲಿ ಪ್ರಥಮ, ದ್ವಿತೀಯ ಸ್ಥಾನ, ಗುಂಪು ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರು ತುಮಕೂರಿನಲ್ಲಿ ನಡೆಯುವ ರಾಜ್ಯಮಟ್ಟದ ಯುವಜನ ಮೇಳದಲ್ಲಿ ಪಾಲ್ಗೊಳ್ಳಲು ಅರ್ಹತೆ ಪಡೆಯಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !