ಫೆ.2ರಂದು ಜಿಲ್ಲಾಮಟ್ಟದ ಉದ್ಯೋಗ ಮೇಳ

7

ಫೆ.2ರಂದು ಜಿಲ್ಲಾಮಟ್ಟದ ಉದ್ಯೋಗ ಮೇಳ

Published:
Updated:

ಮಡಿಕೇರಿ: ಜಿಲ್ಲಾಡಳಿತ ಹಾಗೂ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಸಹಯೋಗದಲ್ಲಿ ಕೇಂದ್ರದ ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯಡಿ ಫೆ. 2ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 3ರ ತನಕ ಕುಶಾಲನಗರದ ಸರ್ಕಾರಿ ಪಾಲಿಟೆಕ್ನಿಕ್ ಆವರಣದಲ್ಲಿ ಜಿಲ್ಲಾಮಟ್ಟದ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.

ಈ ಮೇಳದಲ್ಲಿ ಖಾಸಗಿ ಕಂಪನಿಗಳು ಭಾಗವಹಿಸಿ, ನೇಮಕಾತಿ ಮಾಡಿಕೊಳ್ಳಲಿವೆ. ವಿವಿಧ ವಿದ್ಯಾರ್ಹತೆ ಹಾಗೂ ಎಸ್‌ಎಸ್‌ಎಲ್‌ಸಿ ಅನುತ್ತೀರ್ಣ ಆದವರೂ ಮೇಳದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳು, http://kodagu.nic.in ಅಂತರ್ಜಾಲ ತಾಣದಲ್ಲಿರುವ ಎನ್‌ಸಿಎಸ್ ಜಾಬ್‌ಪೇರ್ ಎಂಬ ಲಿಂಕ್ ಬಳಸಿಕೊಂಡು ಹೆಸರು ನೋಂದಾಯಿಸಿಕೊಳ್ಳಬಹುದು.

ಉದ್ಯೋಗಾಕಾಂಕ್ಷಿಗಳ ನೋಂದಣಿ ಹಾಗೂ ಸಂದರ್ಶನ ಉಚಿತ. ಅಭ್ಯರ್ಥಿಗಳು ಕನಿಷ್ಠ 10 ಸ್ವಯಂ ವಿವರದ ಪ್ರತಿಗಳೊಂದಿಗೆ ಮೇಳಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ, ದೂರವಾಣಿ: 08272 225821 ಸಂಪರ್ಕಿಸಬಹುದು ಎಂದು ಪ್ರಭಾರ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ತಿಳಿಸಿದ್ದಾರೆ.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !