ಶ್ರಮಜೀವಿಗಳಿಗೆ ಇಲ್ಲ ಸೌಲಭ್ಯ  

ಬುಧವಾರ, ಜೂಲೈ 24, 2019
28 °C
ರಾಜ್ಯ ಹಮಾಲಿ ಫೆಡರೇಶನ್‌ ಜಿಲ್ಲಾ ಸಮಿತಿ ಆಗ್ರಹ

ಶ್ರಮಜೀವಿಗಳಿಗೆ ಇಲ್ಲ ಸೌಲಭ್ಯ  

Published:
Updated:
Prajavani

ಮಡಿಕೇರಿ: ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ರಾಜ್ಯ ಹಮಾಲಿ ಫೆಡರೇಶನ್‌ ಜಿಲ್ಲಾ ಸಮಿತಿ ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಸಮಿತಿ ರಾಜ್ಯ ಅಧ್ಯಕ್ಷ ಕೆ.ಮಹಾಂತೇಶ ಮಾತನಾಡಿ, ‘ವ್ಯಾಪಾರ ವಹಿವಾಟಿನಲ್ಲಿ ಮಹತ್ವದ ಪಾತ್ರ ವಹಿಸುವ ಶ್ರಮಜೀವಿಗಳಾದ ಹಮಾಲಿ ಕಾರ್ಮಿಕರು. ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಸುಮಾರು 5 ಲಕ್ಷ ಕಾರ್ಮಿಕರು ಅತ್ಯಂತ ಭಾರವಾದ ಮೂಟೆಗಳನ್ನು ಹೊತ್ತು ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಇಂತಹ ಶ್ರಮ ಜೀವಿಗಳಿಗೆ ಸರ್ಕಾರ ಯಾವುದೇ ಸೌಲಭ್ಯ ನೀಡದೇ ವಂಚಿಸುತ್ತಿದೆ’ ಎಂದು ಆರೋಪಿಸಿದರು.

ಅಸಂಘಟಿತ ಕಾರ್ಮಿಕರಲ್ಲಿ ಶ್ರಮದಾಯಕ ಕೆಲಸ ನಿರ್ವಹಿಸುವ ಇವರಿಗೆ ಯಾವುದೇ ರೀತಿಯ ಸಾಮಾಜಿಕ ಭದ್ರತೆ ಇಲ್ಲ. ಸ್ವಂತ ನಿವೇಶನ, ಮನೆಗಳು ಇಲ್ಲದೇ ಸರ್ಕಾರದ ಮೂಲ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಅವರು ಉತ್ತಮ ಬದುಕಿಗೆ ಸರ್ಕಾರ ವಿವಿಧ ಸೌಲಭ್ಯವನ್ನು ಘೋಷಿಸಬೇಕು ಎಂದು ಆಗ್ರಹಿಸಿದರು.

ಸಮಿತಿಯು ರಾಜ್ಯದಾದ್ಯಂತ ಕೆಲವು ವರ್ಷಗಳಿಂದ ಹಲವಾರು ಹೋರಾಟಗಳನ್ನು ನಡೆಸುತ್ತಾ ಬಂದಿದೆ. ಪರಿಹರಿಸಲು ಈ ಹಿಂದಿನ ಸರ್ಕಾರಗಳು ತಕ್ಕಮಟ್ಟಿನ ಗಮನವನ್ನು ನೀಡಿದೆಯಾದರೂ ಹಮಾಲಿ ಕಾರ್ಮಿಕರ ಪ್ರಮುಖ ಬೇಡಿಕೆಗಳು ಹಾಗೆ ಉಳಿದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಮಿತಿ ಜಿಲ್ಲಾ ಧ್ಯಕ್ಷ ಪಿ.ಆರ್.ಭರತ್‌ ಮಾತನಾಡಿ, ಬಹುತೇಕ ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿರುವ ಬಡ ಹಮಾಲಿ ಕಾರ್ಮಿಕರ ಬೇಡಿಕೆಗಳನ್ನು ಪರಿಹರಿಸಲು ಸೂಕ್ತ ಕ್ರಮ ಸರ್ಕಾರ ವಹಿಸಬೇಕು ಎಂದು ಮನವಿ ಮಾಡಿದರು.

ಪ್ರಧಾನ ಮಂತ್ರಿ ಆವಾಸ್, ದೇವರಾಜ ಅರಸು ವಸತಿ ಯೋಜನೆಗಳನ್ನು ಬಳಸಿಕೊಂಡು ಕೂಡಲೇ ವಸತಿರಹಿತ ಹಮಾಲಿ ಕಾರ್ಮಿಕರಿಗೆ ವಸತಿ ಯೋಜನೆ ರೂಪಿಸಿ ಜಾರಿ ಮಾಡಬೇಕು. ಭವಿಷ್ಯ ನಿಧಿ ತಕ್ಷಣದಿಂದ ಘೋಷಿಸಬೇಕು ಎಂದು ಮನವಿ ಮಾಡಿದರು.

ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್‌ ವಿತರಿಸಿಲ್ಲ. ಅರ್ಜಿ ಸಲ್ಲಿಸಿದ ಎಲ್ಲ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡಬೇಕು ಎಂದು ಮನವಿ ಮಾಡಿದರು.

ಸಮಿತಿ ಪ್ರಧಾನ ಕಾರ್ಯದರ್ಶಿ ಹಸನಬ್ಬ, ಪದಾಧಿಕಾರಿಗಳಾದ ಗೋಪಾಲಕೃಷ್ಣ, ಕೆ.ಎಸ್‌. ಶಾಜಿ, ಬಸೀರ್‌, ಕರೀಂ, ರಾಮು ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !