ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ಅಭಿವೃದ್ಧಿಗೆ ₹ 15 ಕೋಟಿ

ಮಡಿಕೇರಿ ತಾಲ್ಲೂಕು ಪಂಚಾಯಿತಿ ಕೆಡಿಪಿ ಸಭೆ
Last Updated 15 ಡಿಸೆಂಬರ್ 2018, 13:40 IST
ಅಕ್ಷರ ಗಾತ್ರ

ಮಡಿಕೇರಿ: ‘ವಿವಿಧ ಇಲಾಖೆಯಲ್ಲಿ ಲಭ್ಯವಿರುವ ಯೋಜನೆಗಳನ್ನು ಫಲಾನು ಭವಿಗಳಿಗೆ ಸಕಾಲದಲ್ಲಿ ತಲುಪಿಸಲು ಅಧಿಕಾರಿಗಳು ಮುಂದಾಗಬೇಕು’ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್ ಸೂಚಿಸಿದರು.

ಶನಿವಾರ ನಡೆದ ತಾಲ್ಲೂಕು ಪಂಚಾ ಯಿತಿ ಮಾಸಿಕ ಕೆಡಿಪಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಪೂರಕ ಪೌಷ್ಟಿಕ ಆಹಾರ ಯೋಜನೆಯಲ್ಲಿ ಶೇ 47ರಷ್ಟು ಪ್ರಗತಿ ಸಾಧಿಸಲಾಗಿದೆ. ಮೆನು ಚಾರ್ಟ್‌ನಲ್ಲಿ ಇರುವಂತೆಯೇ ಮಕ್ಕಳಿಗೆ ಆಹಾರ ಕೊಡಲು ಅಂಗನವಾಡಿ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. ಮಾತೃಪೂರ್ಣ ಅನುಷ್ಠಾನಗೊಂಡಿರುವ ಅಂಗನವಾಡಿಗಳಲ್ಲಿ ಗರ್ಭಿಣಿ, ಬಾಣಂತಿ ಯರಿಗೆ ಉಪಾಹಾರ ವಿತರಿಸಲಾ ಗುತ್ತಿದೆ’ ಎಂದು ಶಿಶು ಅಭಿವೃದ್ಧಿ ಯೋಜ ನಾಧಿಕಾರಿ ದಮಯಂತಿ ಹೇಳಿದರು.

‘ಪಶುಪಾಲನೆ ಇಲಾಖೆಯ ಅಡಿ ಕೆಲಸ ನಿರ್ವಹಿಸಲು ಸಿಬ್ಬಂದಿ ಕೊರತೆಯಿದೆ. ಹಂದಿ, ಹಸು, ಕೋಳಿ ಸಾಕಿ ಎನ್ನುವ ಅಧಿಕಾರಿಗಳು, ಸಾಕು ಪ್ರಾಣಿಗಳಿಗೆ ತೊಂದರೆ ಉಂಟಾದಲ್ಲಿ ಯಾವುದೇ ಮುಂಜಾಗ್ರತೆ ವಹಿಸುತ್ತಿಲ್ಲ. ಈ ಬಗ್ಗೆ ರೈತರೂ ಅಸಮಾಧಾನ ವ್ಯಕ್ತಪಡಿಸುತ್ತಾರೆ. ಸಂಬಂಧಪಟ್ಟ ಇಲಾಖೆಯವರು ಸೂಕ್ತ ಗಮನ ಹರಿಸಬೇಕು’ ಎಂದು ಸಾಮಾಜಿಕ ನ್ಯಾಯ ಸಮಿತಿ ಕೊಡಪಾಲು ಗಣಪತಿ ಸೂಚಿಸಿದರು.

ಪ್ರಕೃತಿ ವಿಕೋಪದ ನಂತರ ಬೀದಿಬದಿ ಹಾಗೂ ರಸ್ತೆಗಳಲ್ಲಿ ಸಾಕು ಪ್ರಾಣಿಗಳು ಓಡಾಟ ಹೆಚ್ಚಾಗಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಿ. ಲಕ್ಷ್ಮಿ ಅಧಿಕಾರಿಗಳಿಗೆ ಸೂಚಿಸಿದರು.

ಪಂಚಾಯತ್ ರಾಜ್ ಎಂಜಿನಿಯ ರಿಂಗ್ ಇಲಾಖೆ ಅಧಿಕಾರಿ ನಂದಿಕೋಲ್ ಮಾತನಾಡಿ, ಪ್ರಕೃತಿ ವಿಕೋಪದಲ್ಲಿ ಹಾಳಾದ ರಸ್ತೆ ಸರಿಪಡಿಸಲು ಜಿಲ್ಲಾಧಿ ಕಾರಿ ಅವರು ₹ 33 ಕೋಟಿ ಬಿಡುಗಡೆ ಮಾಡಿದ್ದು, ಮಡಿಕೇರಿ ತಾಲ್ಲೂಕಿಗೆ ₹ 15 ಕೋಟಿ ಲಭ್ಯವಿದೆ. ಕೆಲಸ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು.

ವಿವಿಧ ಗ್ರಾಮ ಪಂಚಾಯಿತಿಗೆ ಸ್ಮಶಾನ ಜಾಗ ಹಾಗೂ ಕಸ ವಿಲೇವಾರಿಗೆ ಜಾಗ ನೀಡುವಂತೆ ಸೂಚಿಸಿದ್ದರೂ ಪ್ರಗತಿಯಾಗಿಲ್ಲ ಎಂದು ಪಿ. ಲಕ್ಷ್ಮಿ ಅಸಮಾಧಾನ ವ್ಯಕ್ತಪಡಿಸಿದರು.

ಕಾರುಗುಂದ ಶಾಲೆಗೆ ಪೇರೂರಿನಿಂದ ಬಂದಿರುವ ಶಿಕ್ಷಕರು, ವಿದ್ಯಾರ್ಥಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿಲ್ಲ ಎಂದು ಎಸ್‌ಡಿಎಂಸಿ ಸದಸ್ಯರು ಆರೋಪಿಸಿದ್ದಾರೆ. ಈ ಬಗ್ಗೆ ಇಲಾಖೆ ಯಾವ ಕ್ರಮ ಕೈಗೊಂಡಿದೆ ಎಂದು ಶೋಭಾ ಮೋಹನ್ ಶಿಕ್ಷಣಾಧಿಕಾರಿಯನ್ನು ಪ್ರಶ್ನಿಸಿದರು.

ಪ್ರತಿಕ್ರಿಯಿಸಿದ ಅಧಿಕಾರಿ ಶಿಕ್ಷಕರಿಗೆ ನೋಟಿಸ್ ನೀಡಲಾಗಿದ್ದು, ವರ್ತನೆ ಮರುಕಳಿಸಿದ್ದಲ್ಲಿ ಶಿಸ್ತು ಕ್ರಮ ಜರುಗಿಸುತ್ತೇನೆ ಎಂದು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT