ಮಂಗಳವಾರ, ಜೂನ್ 28, 2022
21 °C
ಕೊರೊನಾ ಸೋಂಕಿತರ ಆರೋಗ್ಯ ವಿಚಾರಿಸಲು ತೆರಳಿದ್ದ ಲಕ್ಷ್ಮಿ, ಬಿಂದು

ಗ್ರಾ.ಪಂ ಅಧ್ಯಕ್ಷೆ, ಕಾರ್ಯಕರ್ತೆ ಕರ್ತವ್ಯಕ್ಕೆ ಅಡ್ಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸೋಮವಾರಪೇಟೆ: ಸಮೀಪದ ಹಾನಗಲ್ಲುಬಾಣೆ ಗ್ರಾಮದಲ್ಲಿ ಕೊರೊನಾ ಸೋಂಕಿತರ ಯೋಗಕ್ಷೇಮ ವಿಚಾರಿಸಲು ಮಂಗಳವಾರ ತೆರಳಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ಪುಂಡರ ಗುಂಪೊಂದು ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆಗೆ ಯತ್ನಿಸಿದಿದೆ.

ಗ್ರಾಮದ ಚಂದ್ರ, ಅವರ ಪತ್ನಿ, ಮಗಳಿಗೆ ಕೋವಿಡ್‌ ದೃಢಪಟ್ಟಿದೆ. ಗ್ರಾಮದ ಇನ್ನೂ ಮೂರು ಕುಟುಂಬಗಳ ಸದಸ್ಯರಿಗೆ ಸೋಂಕು ತಗುಲಿದ್ದು, ಮನೆಗಳನ್ನು ಸೀಲ್‌ಡೌನ್ ಮಾಡಲಾಗಿದೆ. ಈ ಮನೆಗಳಿಗೆ ಗ್ರಾ.ಪಂ ಅಧ್ಯಕ್ಷೆ ಲಕ್ಷ್ಮಿ, ಆಶಾ ಕಾರ್ಯಕರ್ತೆ ಬಿಂದು ಭೇಟಿ ನೀಡಿ ಆರೋಗ್ಯ ವಿಚಾರಿಸುತ್ತಿದ್ದರು. ಇದಕ್ಕೆ ಅಡ್ಡಿಪಡಿಸಿದ ಗುಂಪು, ಸೀಲ್‌ಡೌನ್ ಆಗಿರುವ ಕುಟುಂಬ ಸದಸ್ಯರನ್ನೂ ನಿಂದಿಸಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಹಲ್ಲೆಗೆ ಯತ್ನಿಸಿದ ಯುವಕರ ವಿರುದ್ಧ ಪೊಲೀಸರಿಗೆ ದೂರು ಸಲ್ಲಿಸಲಾಗಿದೆ ಎಂದು ಚಂದ್ರ ತಿಳಿಸಿದರು.

ಆರೋಪಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಇನ್‌ಸ್ಪೆಕ್ಟರ್ ಬಿ.ಜಿ.ಮಹೇಶ್ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.