ಮಂಗಳವಾರ, ಸೆಪ್ಟೆಂಬರ್ 28, 2021
21 °C

ಲಂಚ ಪ್ರಕರಣ: ಪಿಡಿಒಗೆ 7 ವರ್ಷ ಜೈಲು ಶಿಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಲಂಚ ತೆಗೆದುಕೊಂಡ ಪ್ರಕರಣವು ಸಾಬೀತಾಗಿದ್ದು ತಾಲ್ಲೂಕಿನ ನರಿಯಂದಡ ಗ್ರಾಮ ಪಂಚಾಯಿತಿ ಪಿಡಿಒ ಸಚಿನ್‌ ಎಂಬಾತನಿಗೆ ಕೊಡಗು ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್‌ ನ್ಯಾಯಾಲಯವು ಒಟ್ಟು 7 ವರ್ಷ ಜೈಲು ಶಿಕ್ಷೆ ಹಾಗೂ ₹ 8 ಸಾವಿರ ದಂಡ ವಿಧಿಸಿ ಶನಿವಾರ ಆದೇಶಿಸಿದೆ.

ನಾಲ್ಕು ವರ್ಷಗಳ ಹಿಂದೆ ನಿವೇಶನದ ದಾಖಲೆ ನೀಡಲು, ಗ್ರಾಮದ ಸುಬ್ರಹ್ಮಣ್ಯ ಅವರಿಂದ ₹ 3 ಸಾವಿರ ಲಂಚಕ್ಕೆ ಬೇಡಿಕೆಯಿಟಿದ್ದರು. ಅವರು ಎಸಿಬಿಗೆ ದೂರು ನೀಡಿದ್ದರು. ಬಳಿಕ ನಡೆದ ಕಾರ್ಯಾಚರಣೆಯಲ್ಲಿ ಲಂಚ ತೆಗೆದುಕೊಳ್ಳುವಾಗ ಪಿಡಿಒ ಎಸಿಬಿ ಬಲೆಗೆ ಬಿದ್ದಿದ್ದರು. ತನಿಖೆ ನಡೆಸಿದ್ದ ಪೊಲೀಸರು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.

ಭ್ರಷ್ಟಾಚಾರ ನಿರೋಧ ಕಾಯ್ದೆ ಅಡಿ ಪ್ರಕರಣ ದಾಖಲಾಗಿತ್ತು. ಪ್ರತ್ಯೇಕ ಕಲಂಗಳ ಅಡಿ 3 ವರ್ಷ ಜೈಲು ಶಿಕ್ಷೆ ಹಾಗೂ ₹ 3 ಸಾವಿರ ದಂಡ, ದಂಡ ಕೊಡಲು ತಪ್ಪಿದಲ್ಲಿ 3 ತಿಂಗಳು ಶಿಕ್ಷೆ ಹಾಗೂ 4 ವರ್ಷ ಶಿಕ್ಷೆ ಹಾಗೂ ₹ 5 ಸಾವಿರ ದಂಡ, ದಂಡ ಕೊಡಲು ತಪ್ಪಿದಲ್ಲಿ 6 ತಿಂಗಳು ಶಿಕ್ಷೆ ವಿಧಿಸಿ ನ್ಯಾಯಾಧೀಶ ಜಿನರಾಳಕರ ಭೀಮರಾವ ಲಗಮಪ್ಪ ಅವರು ಆದೇಶಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.