ಕುಶಾಲನಗರ: ಉತ್ತರ ಕೊಡಗಿನ ಬಯಲುಸೀಮೆ ಪ್ರದೇಶವಾದ ತೊರೆನೂರು ಗ್ರಾಮದಲ್ಲಿ ಬುಧವಾರ ಕೊರೊನಾ ಭೀತಿ ಹಿನ್ನೆಲೆಯಲ್ಲಿ ಯುಗಾದಿಯಂದು ಹೊಸ ಸಂವತ್ಸರ ಅಂಗವಾಗಿ ರೈತರು ಜನಪದ ಸಂಸ್ಕೃತಿಯ ಪ್ರತೀಕವಾದ ಹೊನ್ನಾರು ಉತ್ಸವ (ಚಿನ್ನದ ಉಳುಮೆ)ವನ್ನು ಸರಳವಾಗಿ ಆಚರಿಸಿದರು.

ಯುಗಾದಿ ಹಬ್ಬವು ಗ್ರಾಮೀಣ ಪ್ರದೇಶದ ರೈತರ ಪಾಲಿಗೆ ಹೊಸ ಸಂವತ್ಸರ. ಆದರೆ ಈ ವರ್ಷ ಕೊರೊನಾ ವೈರಸ್ ಹರಡದಂತೆ ಜಿಲ್ಲೆಯಲ್ಲಿ ಲಾಕ್ ಡೌನ್ ಘೋಷಣೆ ಯಾಗಿರುವುದರಿಂದ ರೈತಾಪಿ ವರ್ಗವು ಹೊಸ ಪಂಚಾಂಗದ ಪ್ರಕಾರ ಹೊನ್ನಾರು ಉತ್ಸವವನ್ನು ಸಾಂಪ್ರಾದಾಯಿಕವಾಗಿ ಆಚರಿಸಿದರು.

ರೈತರು ತಮ್ಮ ತಮ್ಮ ಮನೆಗಳಲ್ಲೇ ಎತ್ತು ಹಾಗೂ ದನಕರುಗಳನ್ನು ನೀರಿನಿಂದ ತೊಳೆದು ಅವುಗಳಿಗೆ ವಿಶೇಷ ಪೂಜೆ ಸಲ್ಲಿಸಿದರು.

ಗ್ರಾಮದ ಬಸವೇಶ್ವರ ದೇವಾಲಯದಲ್ಲಿ ರೈತರು ಪೂಜೆ ಸಲ್ಲಿಸಿದರು. ನಂತರ ದೇವಸ್ಥಾನ ಜಮೀನಿನಲ್ಲಿ ಹೊನ್ನಾರು (ಚಿನ್ನದ ಉಳುಮೆ) ಹೂಡಿ ವರ್ಷಧಾರೆ ಉಳುಮೆಗೆ ಚಾಲನೆ ನೀಡಿದರು. ಈ ಸಂದರ್ಭ ದೇವಾಲಯ ಸಮಿತಿ ಅಧ್ಯಕ್ಷ ಎಚ್.ಬಿ.ಚಂದ್ರಪ್ಪ ಹಾಗೂ ಪದಾಧಿಕಾರಿಗಳು ಇದ್ದರು.

ಮೆರವಣಿಗೆ ಸ್ಥಗಿತ

ಪ್ರತಿ ವರ್ಷ ನೂರಾರು ರೈತರು ತಮ್ಮ ದನಗಳಿಗೆ ಅಲಂಕಾರ ಮಾಡಿ ಗ್ರಾಮದಲ್ಲಿ ಮೆರವಣಿಗೆ ಮೂಲಕ ಅದ್ಧೂರಿಯಾಗಿ ಆಚರಣೆ ಮಾಡುತ್ತಿದ್ದ ಹೊನ್ನಾರು ಉತ್ಸವವನ್ನು ಈ ಬಾರಿ ಸ್ಥಗಿತಗೊಳಿಸಲಾಯಿತು. ಸಾಮೂಹಿಕವಾಗಿ ಆಚರಣೆ ಮಾಡದೆ ರೈತರು ತಮ್ಮ ಮನೆಗಳಲ್ಲಿ ಸರಳವಾಗಿ ಆಚರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.