ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಡಗು: ವಾರಾಂತ್ಯ ಕರ್ಫ್ಯೂ ರದ್ದು

ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಸಭೆ
Last Updated 9 ಸೆಪ್ಟೆಂಬರ್ 2021, 14:21 IST
ಅಕ್ಷರ ಗಾತ್ರ

ಮಡಿಕೇರಿ: ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ತೆರವು ಮಾಡುವಂತೆ ವ್ಯಾಪಾರಸ್ಥರು, ಪ್ರವಾಸೋದ್ಯಮ ಅವಲಂಬಿತರು ಹಾಗೂ ಸ್ಥಳೀಯರಿಂದ ಒತ್ತಡ ಹೆಚ್ಚಾದ ಬೆನ್ನಲೇ ರಾಜ್ಯ ಸರ್ಕಾರವು ಜಿಲ್ಲೆಯಲ್ಲಿ ಕರ್ಫ್ಯೂ ರದ್ದುಗೊಳಿಸಿದೆ.

ಕೋವಿಡ್‌ ದೃಢ ಪ್ರಮಾಣವು ಇಳಿಕೆಯಾಗಿದ್ದರಿಂದ ವಾರಾಂತ್ಯ ಕರ್ಫ್ಯೂ ರದ್ದು ಮಾಡಲಾಗಿದೆ. ಅನಿವಾರ್ಯ ಸಂದರ್ಭದಲ್ಲಿ ಮತ್ತೆ ಕರ್ಫ್ಯೂ ಜಾರಿ ಅಧಿಕಾರವನ್ನು ಗಡಿ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ.

ಗುರುವಾರ ನಡೆದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಈ ವಾರದಿಂದಲೇ ಕರ್ಫ್ಯೂ ತೆರವು ಮಾಡುವ ಸುಳಿವು ನೀಡಿದ್ದರು.

‘ಒಂದು ವಾರದಿಂದ ಕೋವಿಡ್ ದೃಢಪ್ರಮಾಣವು ಶೇ 2ಕ್ಕಿಂತ ಕಡಿಮೆಯಿದೆ. ಇನ್ನೊಂದು ವಾರದಲ್ಲಿ ಅದು ಇನ್ನಷ್ಟು ಇಳಿಕೆಯಾಗುವ ಸಾಧ್ಯತೆಯಿದೆ’ ಎಂದು ತಿಳಿಸಿದ್ದರು.

ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚು ರಂಜನ್‌ ಅವರೂ ಕರ್ಫ್ಯೂ ತೆರವು ಮಾಡುವುದು ಒಳ್ಳೆಯದು ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆದರೆ, ಚೆಕ್‌ಪೋಸ್ಟ್‌ಗಳಲ್ಲಿ ಬಿಗಿಯಾದ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಕೇರಳ ರಾಜ್ಯದಲ್ಲಿ ನಿಫಾ ವೈರಸ್ ಕಂಡು ಬಂದಿದೆ. ಜಿಲ್ಲೆಯಲ್ಲೂ ಕಟ್ಟೆಚ್ಚರ ವಹಿಸಬೇಕು ಎಂದು ಸಚಿವರು ಸೂಚಿಸಿದರು.

ಕೋವಿಡ್ ನಿಯಂತ್ರಣ ಲಸಿಕೆ ಶೇ 83ರಷ್ಟು ಪೂರ್ಣಗೊಂಡಿರುವುದರಿಂದ ಸೆ.25ರೊಳಗೆ ಪ್ರಥಮ ಹಂತದ ಲಸಿಕೆ ನೀಡುವ ಅಭಿಯಾನ ಪೂರ್ಣಗೊಳಿಸಿ ಗುರಿ ಸಾಧಿಸಬೇಕು ಎಂದು ಆದೇಶಿಸಿದರು.

ಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಅವರು, ಡಿಎಚ್‌ಒ ಜಿಲ್ಲೆಯ ಎಲ್ಲ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಬೇಕು. ಸಮಸ್ಯೆಗಳಿದ್ದಲ್ಲಿ ಗಮನಕ್ಕೆ ತರುವಂತೆ ಅವರು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್, ಪ್ರಥಮ ಹಂತದ ಡೋಸ್ ಶೇ 100ರಷ್ಟು ಪ್ರಗತಿ ಸಾಧಿಸಲು 48 ಸಾವಿರ ಲಸಿಕೆ ಬೇಕಿದೆ ಎಂದು ಮಾಹಿತಿ ನೀಡಿದರು.

ಬೆಳೆ ಸಮೀಕ್ಷೆ: ಕಾಫಿ, ಕರಿಮೆಣಸು, ಅಡಿಕೆ ಬೆಳೆ ಹಾನಿ ಸಂಬಂಧ ಮರು ಸಮೀಕ್ಷೆ ಮಾಡಿ ವರದಿ ನೀಡಬೇಕು ಎಂದು ಸಚಿವರು ಸೂಚಿಸಿದರು.

ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಜಿಲ್ಲೆಯ 5 ತಾಲ್ಲೂಕುಗಳಲ್ಲಿ ನಿವೇಶನ ಹಂಚಿಕೆಗೆ ಜಾಗ ಕಾಯ್ದಿರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪಶ್ಚಿಮಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ರವಿ ಕುಶಾಲಪ್ಪ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ಕಾರ್ಯಪ್ಪ, ವೈದ್ಯಕೀಯ ಅಧೀಕ್ಷಕ ಡಾ.ಮಂಜುನಾಥ್, ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ, ಕಾಫಿ ಮಂಡಳಿ ಉಪ ನಿರ್ದೇಶಕರಾದ ಶಿವಕುಮಾರ ಸ್ವಾಮಿ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಶಶಿಧರ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT