ನಾಪೋಕ್ಲು: ಪಟ್ಟಣದಲ್ಲಿ ಗುರುವಾರ ಸಂಜೆ ಹೆಜ್ಜೇನು ದಾಳಿಯಿಂದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ಇಲ್ಲಿನ ಅಜ್ಜಿಮುಟ್ಟ ನಿವಾಸಿ ಟಿ.ಕೆ. ವೇಲಾಯುಧನ್ (68) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗಾಯಗೊಂಡಿರುವ ಖಾಸಗಿ ಆಸ್ಪತ್ರೆ ಸಿಬ್ಬಂದಿ ಎಂ.ಟಿ. ಸುರೇಶ (29), ಮಣವಟ್ಟೀರ ಗಗನ್ (25) ಹಾಗೂ ವೇಲಾಯುಧನ್ (35) ಎಂಬುವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

‘ಸಮೀಪದ ಹಳೆತಾಲೂಕಿನಿಂದ ಪಟ್ಟಣದ ಕಡೆಗೆ ಬರುತ್ತಿದ್ದಾಗ ಎಲ್ಲಿಂದಲೋ ಬಂದ ಹೆಜ್ಜೇನುಗಳು ದಾಳಿ ನಡೆಸಿದವು. ಕೆಲವರು ಗಾಬರಿಯಿಂದ ಸುರಕ್ಷಿತ ಜಾಗಗಳಿಗೆ ಓಡಿ ತಪ್ಪಿಸಿಕೊಂಡರು’ ಎಂದು ಸುರೇಶ್ ಪ್ರತಿಕ್ರಿಯಿಸಿದರು.

ಹೆಜ್ಜೇನು ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟು, ಹಲವರು ಗಾಯಗೊಂಡಿದ್ದರಿಂದ ಪಟ್ಟಣದ ಜನರು ಆತಂಕಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.