ಕೊಡವರ ಕುಲಶಾಸ್ತ್ರ ಅಧ್ಯಯನ ಸಮೀಕ್ಷೆಗೆ ಆಗ್ರಹ

7
ಪುನರ್‌ ಅಧ್ಯಯನ ಆದೇಶಕ್ಕೆ ಕೊಡವ ನ್ಯಾಷನಲ್ ಕೌನ್ಸಿಲ್‌ ಸ್ವಾಗತ

ಕೊಡವರ ಕುಲಶಾಸ್ತ್ರ ಅಧ್ಯಯನ ಸಮೀಕ್ಷೆಗೆ ಆಗ್ರಹ

Published:
Updated:
Prajavani

ಕುಶಾಲನಗರ: ಕೊಡವರ ಕುಲಶಾಸ್ತ್ರದ ಪುನರ್‌ ಅಧ್ಯಯನಕ್ಕೆ ಸಮಾಜ ಕಲ್ಯಾಣ ಇಲಾಖೆ ಆದೇಶಿಸಿದ್ದು, ಸಮೀಕ್ಷಾ ಕಾರ್ಯವನ್ನು ತ್ವರಿಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಕೊಡವ ನ್ಯಾಷನಲ್ ಕೌನ್ಸಿಲ್‌ (ಸಿಎನ್‌ಸಿ) ಆಗ್ರಹಿಸಿದೆ.

‘ಕುಲಶಾಸ್ತ್ರ ಪುನರ್‌ ಅಧ್ಯಯನಕ್ಕೆ ಆದೇಶಿಸಿರುವ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ ಹಾಗೂ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇವೆ. ಆದರೆ, ಸಮೀಕ್ಷಾ ಕಾರ್ಯ ಪೂರ್ಣಗೊಳಿಸಿ ಸಂಪುಟ ಸಭೆ ಒಪ್ಪಿಗೆ ಪಡೆದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು’ ಎಂದು ಸಿಎನ್‌ಸಿ ಮುಖ್ಯಸ್ಥ ಎನ್.ಯು.ನಾಚಪ್ಪ ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಒತ್ತಾಯಿಸಿದರು.

ಮೈಸೂರು ಬುಡಕಟ್ಟು ಅಧ್ಯಯನ ಸಂಸ್ಥೆಗೆ ಕುಲಶಾಸ್ತ್ರ ಅಧ್ಯಯನದ ಜವಾಬ್ದಾರಿ ವಹಿಸಿ ಸಮೀಕ್ಷಾ ಕಾರ್ಯಕ್ಕೆ ₹11 ಲಕ್ಷ ಬಿಡುಗಡೆ ಮಾಡಲಾಗಿತ್ತು. ಮೈಸೂರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಗಳ ತಂಡವು 2016 ನ.16 ರಂದು ಅಧ್ಯಯನ ಕೈಗೊಂಡಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಶೇ 40ರಷ್ಟು ಅಧ್ಯಯನ ನಡೆದಿತ್ತು. ಆದರೆ, ಡಿ.18ರಂದು ಸಮೀಕ್ಷಾ ಕಾರ್ಯವನ್ನು ಸ್ಥಗಿತಗೊಳಿಸಲಾಗಿತ್ತು ಎಂದು ಬೇಸರ ವ್ಯಕ್ತಪಡಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !