ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಫಾ ವೈರಸ್‌: ಮಡಿಕೇರಿಯಲ್ಲೂ ಕಟ್ಟೆಚ್ಚರ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್ ಮಾಹಿತಿ
Last Updated 7 ಸೆಪ್ಟೆಂಬರ್ 2021, 13:54 IST
ಅಕ್ಷರ ಗಾತ್ರ

ಮಡಿಕೇರಿ: ‘ನಿಫಾ’ ವೈರಸ್‌ಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಯಾವುದೇ ರೀತಿಯ ಪ್ರಕರಣಗಳು ಕಂಡು ಬಂದಿಲ್ಲ. ಆದರೂ, ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್ ಅವರು ತಿಳಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ನೆರೆಯ ಕೇರಳ ರಾಜ್ಯದಲ್ಲಿ ನಿಫಾ ವೈರಸ್‌ ಕಂಡು ಬಂದಿರುವುದರಿಂದ ಜಿಲ್ಲೆಯಲ್ಲಿಯೂ ಸಹ ಕಟ್ಟೆಚ್ಚರ ವಹಿಸಲಾಗಿದೆ’ ಎಂದು ತಿಳಿಸಿದರು.

ಜ್ವರ, ತಲೆನೋವು, ತಲೆ ಸುತ್ತುವಿಕೆ, ವಾಂತಿ, ಪ್ರಜ್ಞಾಹೀನತೆಗೆ ಒಳಗಾಗುವುದು, ಅತಿಯಾದ ಜ್ವರ ಮೆದುಳಿಗೆ ವ್ಯಾಪಿಸುವುದು, ಮಾತಿನಲ್ಲಿ ತೊದಲುವಿಕೆ, ಅಪಸ್ವರ... ಇವು ನಿಫಾ ವೈರಸ್‍ನ ಲಕ್ಷಣಗಳು ಎಂದು ತಿಳಿಸಿದರು.

ಸೋಂಕಿತ 4ರಿಂದ 18 ದಿನಗಳಲ್ಲಿ ನಿಫಾ ವೈರಸ್ ರೋಗದ ಲಕ್ಷಣಗಳು ಕಾಣಿಸಿಕೊಳ್ಳಲಿದೆ. ಈ ಲಕ್ಷಣಗಳು ಕಂಡು ಬಂದಲ್ಲಿ ಆಸ್ಪತ್ರೆಗೆ ತೆರಳಿ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.

ನಿಫಾ ವೈರಸ್ ಬಗ್ಗೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಅಶ್ವಿನಿ ಆಸ್ಪತ್ರೆಯಲ್ಲಿ 5 ಹಾಸಿಗೆ, ತಾಲ್ಲೂಕು ಆಸ್ಪತ್ರೆಗಳಲ್ಲಿ 2 ಹಾಸಿಗೆಯನ್ನು ಕಾಯ್ದಿರಿಸಲಾಗುವುದು ಎಂದು ತಿಳಿಸಿದರು.

ಕೋವಿಡ್ ದೃಢಪ್ರಮಾಣವು 2ಕ್ಕಿಂತ ಕಡಿಮೆಯಿದೆ. ಇನ್ನೊಂದು ವಾರದಲ್ಲಿ ಒಂದಕ್ಕಿಂತ ಕಡಿಮೆಯಾಗುವ ಸಾಧ್ಯತೆಯಿದೆ. ಪ್ರತೀದಿನ ಮೂರುವರೆಯಿಂದ ನಾಲ್ಕು ಸಾವಿರ ಮಾದರಿಗಳನ್ನು ಪರೀಕ್ಷೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾ ಲಸಿಕಾ ಅಧಿಕಾರಿ ಡಾ.ಗೋಪಿನಾಥ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮಹೇಶ್ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT