ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡಿಕೇರಿ, ವಿರಾಜಪೇಟೆ ರಸ್ತೆ; ರಾಷ್ಟ್ರೀಯ ಹೆದ್ದಾರಿಯಾಗಿ ಮಾರ್ಪಡಿಸಲು ಒಪ್ಪಿಗೆ

Last Updated 12 ಜೂನ್ 2022, 10:29 IST
ಅಕ್ಷರ ಗಾತ್ರ

ಮಡಿಕೇರಿ: ಚನ್ನರಾಯಪಟ್ಟಣ, ಸೋಮವಾರಪೇಟೆ, ಮಡಿಕೇರಿ ಮತ್ತು ವಿರಾಜಪೇಟೆ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮಾರ್ಪಡಿಸಲು ಕೇಂದ್ರ ಸಚಿವ ನಿತಿನ್ ಗಡ್ಕರಿ‌ ಒಪ್ಪಿಗೆ ಸೂಚಿಸಿದರು.

ಖಾಸಗಿ ಪ್ರವಾಸಕ್ಕೆ ಇಲ್ಲಿಗೆ ಬಂದಿರುವ ಅವರನ್ನು ಶಾಸಕ‌ ಅಪ್ಪಚ್ಚುರಂಜನ್ ಭಾನುವಾರ ಭೇಟಿಯಾಗಿ ಚರ್ಚೆ ನಡೆಸಿದರು.

ಈ ರಸ್ತೆಯನ್ನು ಮೇಲ್ದರ್ಜೆಗೆ ಏರಿಸಿ ದ್ವಿಪಥ ರಸ್ತೆ ನಿರ್ಮಾಣ ಮಾಡಲು ಅನುದಾನ ಬಿಡುಗಡೆ ಮಾಡುವಂತೆ ಮನವಿ ಪತ್ರ ಸಲ್ಲಿಸಿದರು.
ಮನವಿ ಸ್ಪಂದಿಸಿದ ಸಚಿವರು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸುವ ಭರವಸೆ ನೀಡಿದರು ಎಂದು ಅಪ್ಪಚ್ಚುರಂಜನ್ ತಿಳಿಸಿದರು.

ಕೊಡಗಿನಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿಗಾಗಿ ಕೇಬಲ್ ಕಾರ್ ಮಾಡಬಹುದು. ಈ ಕುರಿತ ಅಂದಾಜು ಪಟ್ಟಿ ಸಲ್ಲಿಸುವಂತೆಯೂ ಸೂಚಿಸಿದರು ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT