ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸುಂಟಿಕೊಪ್ಪ | ಆಟೊ ವಿನ್ಯಾಸ ಬದಲಾಯಿಸದಂತೆ ಸೂಚನೆ

Published 20 ಆಗಸ್ಟ್ 2024, 14:39 IST
Last Updated 20 ಆಗಸ್ಟ್ 2024, 14:39 IST
ಅಕ್ಷರ ಗಾತ್ರ

ಸುಂಟಿಕೊಪ್ಪ: 'ಪ್ರತಿಯೊಬ್ಬ ಚಾಲಕರು ವಾಹನಗಳನ್ನು ಚಲಾಯಿಸುವಾಗ ಸಂಚಾರ ನಿಯಮಗಳನ್ನು ಪಾಲಿಸುವಂತೆ" ಜಿಲ್ಲಾ ರಸ್ತೆ ಸಾರಿಗೆ ಇಲಾಖೆ ಅಧಿಕಾರಿ ಶಿವರಾಮ್ ಮಾಹಿತಿ ನೀಡಿದರು.

ಜಿಲ್ಲಾ ರಸ್ತೆ ಸಾರಿಗೆ ಇಲಾಖೆ ಅಧಿಕಾರಿ ಶಿವರಾಮ್ ಸುಂಟಿಕೊಪ್ಪ ಆಟೊ ಚಾಲಕರ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿದರು.

‘ಇಲ್ಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 250ಕ್ಕೂ ಹೆಚ್ಚು ಆಟೋಗಳು ಸಂಚರಿಸುತ್ತಿವೆ. ರಸ್ತೆ ಸುರಕ್ಷತಾ ನಿಯಮಗಳನ್ನು ಎಲ್ಲರೂ ಪಾಲಿಸಬೇಕು. ಪಟ್ಟಣದಲ್ಲಿ ಸಂಚರಿಸುತ್ತಿರುವ ಕೆಲವು ಆಟೊ ರಿಕ್ಷಾ ಮಾಲೀಕರು ತಮಗೆ ಬೇಕಾದಂತೆ ಆಟೊಗಳನ್ನು ವಿಸ್ಯಾಸ ಗೊಳಿಸಿಕೊಂಡಿದ್ದಾರೆ. ಅವುಗಳನ್ನು ತೆರವುಗೊಳಿಸುವಂತೆ ಸೂಚಿಸಿದರಲ್ಲದೇ, ವಾಹನ ಚಾಲನೆ ಮಾಡುವಾಗ ಚಾಲಕರು ಚಾಲನಾ ಪರವಾನಗಿ, ದಾಖಲಾತಿ ಹಾಗೂ ಸಮವಸ್ತ್ರ ಕಡ್ಡಾಯವಾಗಿ ಹೊಂದಿರಬೇಕು’ ಎಂದು ಸೂಚಿಸಿದರು.

ಈ ಸಂದರ್ಭ ಸಾರಿಗೆ ಇಲಾಖೆ ಸಿಬ್ಬಂದಿ, ಆಟೊ ಚಾಲಕರ ಸಂಘದ ಅಧ್ಯಕ್ಷ ಸಿ.ಸಿ.ಸುನೀಲ್‌ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT