ಜೇತ್ನಾದಿಂದ ಕೌಶಲ ತರಬೇತಿಗೆ ಸೂಚನೆ
ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯಡಿಯಲ್ಲಿ ಪರಿಶಿಷ್ಟ ಪಂಗಡ ಜೇನು ಕುರುಬ ಜನಾಂಗದ ಯುವಕರಿಗೆ ರ‍್ಯಾಪ್ಟಿಂಗ್ ಸಲಕರಣೆಗಳನ್ನು ವಿತರಿಸಲು ತಲಾ ₹2 ಲಕ್ಷ ದಂತೆ 9 ಜನ ಫಲಾನುಭವಿಗಳಿಗೆ ₹18 ಲಕ್ಷ ಬಿಡುಗಡೆಯಾಗಿದ್ದು ಈ ಯುವಕರು ಈಗಾಗಲೇ ತಲಾ ಒಂದು ರ‍್ಯಾಪ್ಟ್ ಖರೀದಿ ಮಾಡಿದ್ದಾರೆ. ಈ ಸಂಬಂಧ ದುಬಾರೆಯಲ್ಲಿ ರ‍್ಯಾಪ್ಟಿಂಗ್ ನಡೆಸಲು ಪರವಾನಗಿ ನೀಡುವಂತೆ ಕೋರಿದ್ದು ಈ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಹೊಸದಾಗಿ ರಿವರ್ ರ‍್ಯಾಪ್ಟಿಂಗ್ ನಡೆಸಲು ಅನುಮತಿಗಾಗಿ ಹಲವು ಅರ್ಜಿಗಳು ಸಲ್ಲಿಕೆಯಾಗಿರುವ ಹಿನ್ನೆಲೆ ಈಗಾಗಲೇ ರಿವರ್ ರ‍್ಯಾಪ್ಟಿಂಗ್ ನಡೆಸುತ್ತಿರುವವರು ಹೊಸದಾಗಿ ರಿವರ್ ರ‍್ಯಾಪ್ಟಿಂಗ್‌ಗೆ ಅನುಮತಿ ನೀಡಬಾರದು ಎಂದು ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದು ಸದ್ಯ ತೀರ್ಪು ಪ್ರಕಟವಾದ ನಂತರ ಮುಂದಿನ ಕ್ರಮ ವಹಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ರಿವರ್ ರ‍್ಯಾಪ್ಟಿಂಗ್ ನಡೆಸುವವರು ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ (ಜೇತ್ನಾ) ಯಿಂದ ಕೌಶಲ ತರಬೇತಿ ಪಡೆಯಲು ಸಲಹೆ ನೀಡಲಾಯಿತು.