ಮಂಗಳವಾರ, ಏಪ್ರಿಲ್ 20, 2021
29 °C
‘ತಾತ್ಕಾಲಿಕ ಹಣ ಬೇಡ, ಶಾಶ್ವತ ಪುನರ್ವಸತಿ ಕಲ್ಪಿಸಿ’: ಸಂತ್ರಸ್ತರ ಆಗ್ರಹ

ಪರಿಹಾರ ಕೇಂದ್ರಕ್ಕೆ ಅಧಿಕಾರಿಗಳ ದೌಡು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಿದ್ದಾಪುರ (ಕೊಡಗು ಜಿಲ್ಲೆ): ಸಮೀಪದ ನೆಲ್ಯಹುದಿಕೇರಿಯ ಪರಿಹಾರ ಕೇಂದ್ರಕ್ಕೆ, ಉಪ ವಿಭಾಗಾಧಿಕಾರಿ ಜವರೇಗೌಡ ನೇತೃತ್ವದಲ್ಲಿ ಬುಧವಾರ ಭೇಟಿ ನೀಡಿದ ಅಧಿಕಾರಿಗಳು, ನೆರೆ ಸಂತ್ರಸ್ತರ ಸಮಸ್ಯೆ ಆಲಿಸಿದರು.

‘ಪ್ರಜಾವಾಣಿ’ಯ ನ.20ರ ಸಂಚಿಕೆಯಲ್ಲಿ ‘ನಗಣ್ಯವಾದ ಸಂತ್ರಸ್ತರ ಬವಣೆ’ ಶೀರ್ಷಿಕೆ ಅಡಿ ಸಂತ್ರಸ್ತರ ಸಮಸ್ಯೆ ಕುರಿತು ವರದಿ ಪ್ರಕಟವಾದ ಬೆನ್ನಲೇ ಎಚ್ಚೆತ್ತ ಅಧಿಕಾರಿಗಳು, ಸಂತ್ರಸ್ತರ ಸಮಸ್ಯೆ ಕೇಳುವ ಪ್ರಯತ್ನ ಮಾಡಿದರು.

ಪರಿಹಾರ ಕೇಂದ್ರವನ್ನು ಬಿಟ್ಟು ಬಾಡಿಗೆ ಮನೆಗಳಿಗೆ ತೆರಳುವಂತೆ ಮನವಿ ಮಾಡಿದ ಜವರೇಗೌಡ, ಬಾಡಿಗೆ ಮನೆಗೆ ಹೋಗುವ ಪ್ರತಿ ಸಂತ್ರಸ್ತ ಕುಟುಂಬಕ್ಕೆ ₹ 25 ಸಾವಿರ ನೀಡಲಾಗುವುದು ಎಂದು ಭರವಸೆ ನೀಡಿದರು.

‘ನೆಲ್ಯಹುದಿಕೇರಿಯ ಬೆಟ್ಟದಕಾಡುವಿನಲ್ಲಿ ಗುರುತಿಸಲಾಗಿದ್ದ ಸರ್ಕಾರಿ ಜಾಗಕ್ಕೆ ನ್ಯಾಯಾಲಯವು ತಡೆಯಾಜ್ಞೆ ನೀಡಿದೆ. ತಡೆಯಾಜ್ಞೆ ತೆರವಿಗೆ ಕ್ರಮ ಕೈಗೊಳ್ಳಲಾಗಿದೆ. ಸಂತ್ರಸ್ತರಿಗೆ ಸರ್ಕಾರಿ ಒತ್ತುವರಿ ಜಾಗವನ್ನು ತೆರವುಗೊಳಿಸಿ, ಶಾಶ್ವತ ಸೂರು ಒದಗಿಸಲಾಗುವುದು’ ಎಂದು ಹೇಳಿದರು.

‘ತಾತ್ಕಾಲಿಕ ಹಣ ಬೇಡ; ನಮಗೆ ಶಾಶ್ವತ ಪುನರ್ವಸತಿಯನ್ನೇ ಕಲ್ಪಿಸಿ’ ಎಂದು ನೆರೆ ಸಂತ್ರಸ್ತರು ಇದೇ ವೇಳೆ ಮನವಿ ಮಾಡಿಕೊಂಡರು.

ಗ್ರಾಮ ಲೆಕ್ಕಿಗ ಸಂತೋಷ್, ಪಿಡಿಒ ಅನಿಲ್‌ಕುಮಾರ್, ಹೋರಾಟ ಸಮಿತಿ ಮುಖಂಡ ಪಿ.ಆರ್.ಭರತ್ ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು