ಮಡಿಕೇರಿ: ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ, ತೂಬನಕೊಲ್ಲಿ ಗ್ರಾಮದಲ್ಲಿ ಸೋಮವಾರ ರಾತ್ರಿ ಕಾಡಾನೆ ದಾಳಿಗೆ ವೃದ್ಧೆ ಬಲಿಯಾಗಿದ್ದಾರೆ. ಲಕ್ಷ್ಮಿ (70) ಮೃತಪಟ್ಟವರು.

ತೂಬನಕೊಲ್ಲಿಯ ಕಾಫಿ ತೋಟದ ಲೈನ್‌ಮನೆಯಲ್ಲಿ ವೃದ್ಧೆ ವಾಸವಿದ್ದರು. ಸೋಮವಾರ ರಾತ್ರಿ ಮನೆಯಿಂದ ಹೊರಹೋಗಿದ್ದ ವೇಳೆ, ಕಾಡಾನೆ ದಾಳಿ ನಡೆಸಿದೆ.

ಗಾಯಗೊಂಡ ವೃದ್ಧೆಯನ್ನು ಮಡಿಕೇರಿಯಲ್ಲಿರುವ ಜಿಲ್ಲಾ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ.

ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಯಿತು. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.