ಬುಧವಾರ, 9 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿರಾಜಪೇಟೆ: ಓಣಂ ಆಚರಣೆ 29ರಂದು

ಮುತ್ತಪ್ಪನ್ ಮಲಯಾಳಿ ಸಮಾಜದಿಂದ ಕಾರ್ಯಕ್ರಮ: ಪೂಕಳಂ ಸ್ಪರ್ಧೆಗೆ ಆಹ್ವಾನ
Published : 12 ಸೆಪ್ಟೆಂಬರ್ 2024, 13:48 IST
Last Updated : 12 ಸೆಪ್ಟೆಂಬರ್ 2024, 13:48 IST
ಫಾಲೋ ಮಾಡಿ
Comments

ವಿರಾಜಪೇಟೆ: ‘ಪಟ್ಟಣದ ಮುತ್ತಪ್ಪನ್ ಮಲಯಾಳಿ ಸಮಾಜ ಸಮಿತಿಯಿಂದ ಸೆ.29ರಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಓಣಂ ಹಬ್ಬ ಆಚರಿಸಲಾಗುತ್ತದೆ’ ಎಂದು ಸಮಿತಿ ಅಧ್ಯಕ್ಷ ಪಿ.ಜಿ.ಸುಮೇಶ್ ತಿಳಿಸಿದರು.

ಪಟ್ಟಣದ ಮಲಬಾರ್ ರಸ್ತೆಯಲ್ಲಿನ ಮುತ್ತಪ್ಪ ದೇವಾಲಯದ ಸಭಾಂಗಣದಲ್ಲಿ ಮಂಗಳವಾರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂದು ಬೆಳಿಗ್ಗೆ 8.30ಕ್ಕೆ ಮಹಾಬಲಿ ಚಕ್ರವರ್ತಿಯನ್ನು ಬರಮಾಡಿಕೊಂಡು, ದೇಗುಲದಲ್ಲಿ ದೀಪ ಬೆಳಗಿಸಿದ ಬಳಿಕ ಸಿಂಗಾರಿ ಮೇಳಂ ಮತ್ತು ವಿವಿಧ ಸಾಂಸ್ಕೃತಿಕ ಕಲಾ ತಂಡಗಳೊಂದಿಗೆ ಪಟ್ಟಣದಲ್ಲಿ ಮೆರವಣಿಗೆ ನಡೆಸಲಾಗುತ್ತದೆ. ಮಧ್ಯಾಹ್ನ 12.30ಕ್ಕೆ ಓಣಂ ಸದ್ಯ ನಡೆದು ಬಳಿಕ ಸಭಾ ಕಾರ್ಯಕ್ರಮ ನಡೆಯಲಿದೆ’ ಎಂದರು.

ಖಜಾಂಚಿ ಟಿ.ಆರ್.ಗಣೇಶ್ ಮಾತನಾಡಿ, ‘ಸಭಾ ಕಾರ್ಯಕ್ರಮದಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ವಿಧಾನ ಪರಿಷತ್‌ ಸದಸ್ಯ ಎಂ.ಸುಜಾ ಕುಶಾಲಪ್ಪ ಹಾಗೂ ಸಮಿತಿಯ ಪದಾಧಿಕಾರಿಗಳು, ಎಸ್.ಎನ್.ಡಿ.ಪಿ ಪದಾಧಿಕಾರಿಗಳು ಭಾಗವಹಿಸುವರು. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಮತ್ತು ಎಸ್ಎಸ್ಎಲ್‌ಸಿ, ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ಸಮುದಾಯದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು’ ಎಂದರು.

ಕಾರ್ಯದರ್ಶಿ ಸಿ.ಆರ್.ಬಾಬು ಮಾತನಾಡಿ, ‘ಪಟ್ಟಣ ಮತ್ತು ಸುತ್ತಮುತ್ತಲಿನ ಗ್ರಾಮದಲ್ಲಿನ ಸಮುದಾಯ ಬಾಂಧವರಿಗೆ ಹೂವಿನ ರಂಗೋಲಿ (ಪೂಕಳಂ) ಸ್ಪರ್ಧೆಯನ್ನು ಸೆ.28ರಂದು ನಡೆಸಲಾಗುವುದು. ಒಟ್ಟು 8 ತಂಡಗಳಿಗೆ ಅವಕಾಶವಿದ್ದು, ಭಾಗವಹಿಸಲು ಸೆ.20ರೊಳಗೆ ನೋಂದಾಯಿಸಿಕೊಳ್ಳಬೇಕು. ಮಾಹಿತಿಗೆ 90351 97151 ಅಥವಾ 9731258197 ಸಂಪರ್ಕಿಸಿ’ ಎಂದು ಮನವಿ ಮಾಡಿದರು.

ಗೋಷ್ಠಿಯಲ್ಲಿ ಸಮಿತಿಯ ಗೌರವ ಅಧ್ಯಕ್ಷ ಟಿ.ಕೆ.ಪದ್ಮನಾಭ, ಉಪಾಧ್ಯಕ್ಷ ಸಿ.ಆರ್.ಸಜೀವನ್, ಸಲಹೆಗಾರ ಪಿ.ಜೆ.ವಿಶ್ವನಾಥ್, ಸದಸ್ಯರಾದ ಕೆ.ಎನ್. ಉಪೇಂದ್ರ, ವಿಜಯನ್, ಸುರೇಶ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT