ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಈ ಹಿಂದೆ 500 ಮಂದಿ ಗೃಹರಕ್ಷಕರನ್ನು ನಿಯೋಜಿಸಿಕೊಳ್ಳಲು ಅವಕಾಶ ಇತ್ತು. ಯಾರೂ ಸಹ ಗೃಹರಕ್ಷಕರಾಗಿ ಕರ್ತವ್ಯ ನಿರ್ವಹಿಸಲು ಮುಂದೆ ಬರದಿರುವುದರಿಂದ ಅವರ ಸಂಖ್ಯೆಯನ್ನು 300ಕ್ಕೆ ಇಳಿಸಲಾಯಿತು. ಆದರೆ, ಈ 300 ಮಂದಿಯಲ್ಲಿ ಕೇವಲ 187 ಮಂದಿ ಮಾತ್ರ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರು ಹಾಗೂ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್.ಸುಂದರರಾಜ್ ತಿಳಿಸಿದರು.

ಜಿಲ್ಲಾ ಗೃಹ ರಕ್ಷಕದಳ ವತಿಯಿಂದ ನಗರದ ಜಿಲ್ಲಾ ಗೃಹರಕ್ಷಕದಳ ಕಚೇರಿಯಲ್ಲಿ ನಡೆದ ‘ಗೃಹ ರಕ್ಷಕದಳ ದಿನಾಚರಣೆ’ಯಲ್ಲಿ ಅವರು ಮಾತನಾಡಿದರು.

ಬೇರೆ ಬೇರೆ ಜಿಲ್ಲೆಗಳಲ್ಲಿ ಗೃಹರಕ್ಷಕದಳದಲ್ಲಿ ಕರ್ತವ್ಯ ನಿರ್ವಹಿಸಲು ಸ್ವಯಂ ಪ್ರೇರಣೆಯಿಂದ ಜನರು ಮುಂದೆ ಬರುತ್ತಾರೆ ಎಂದರು.

ಗೃಹರಕ್ಷಕ ಸಿಬ್ಬಂದಿಗಳಿಗೆ ಕರ್ತವ್ಯ ನಿರ್ವಹಿಸುವ ದಿನಕ್ಕೆ ₹ 500 ನೀಡಲಾಗುತ್ತದೆ. ಗೃಹರಕ್ಷಕರು ಪೊಲೀಸರಂತೆ ಕರ್ತವ್ಯ ನಿರ್ವಹಿಸುವುದನ್ನು ಕಾಣುತ್ತೇವೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಇತ್ತೀಚಿನ ದಿನಗಳಲ್ಲಿ ಪದವಿ ಪಡೆದವರು ಸಹ ಗೃಹರಕ್ಷಕದಳ ಹುದ್ದೆಗೆ ಬರುತ್ತಾರೆ. ಯಾವುದೇ ಕೆಲಸವನ್ನು ಶ್ರದ್ಧೆಯಿಂದ ನಿರ್ವಹಿಸಿ, ಮುಂದಿನ ಭವಿಷ್ಯವನ್ನು ರೂಪಿಸಿಕೊಳ್ಳುವತ್ತ ಗಮನಹರಿಸಬೇಕು ಎಂದು ಅವರು ಸಲಹೆ ನೀಡಿದರು.

ಗೃಹರಕ್ಷಕರು ಹಬ್ಬ ಹರಿದಿನಗಳು, ಜಾತ್ರೆಗಳು, ವಿಶೇಷ ಸಂದರ್ಭಗಳಲ್ಲಿ ಹಾಗೂ ವಿವಿಧ ಇಲಾಖೆಗಳ ಜೊತೆ ನಿಕಟ ಸಂಪರ್ಕ ಹೊಂದಿ ಕರ್ತವ್ಯ ನಿರ್ವಹಿಸುತ್ತಾರೆ ಎಂದರು.

ಗೃಹರಕ್ಷಕರಲ್ಲಿ ಶಿಸ್ತು, ಸಮಯಪ್ರಜ್ಞೆ ಕಾಣಬಹುದು. ಆ ದಿಸೆಯಲ್ಲಿ ಸಮಾಜ ಗೃಹರಕ್ಷಕರನ್ನು ಗುರುತಿಸುತ್ತದೆ. ಕೊಡಗು ಜಿಲ್ಲೆಯಲ್ಲಿ ಗೃಹರಕ್ಷಕರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಮಾತನಾಡಿ, ‘ಗೃಹರಕ್ಷಕರು ಸಮಾಜದ ಒಳಿತಿಗಾಗಿ ಕೆಲಸ ನಿರ್ವಹಿಸುತ್ತಾರೆ. ಆ ನಿಟ್ಟಿನಲ್ಲಿ ತಮ್ಮಗಳ ಆರೋಗ್ಯವನ್ನು ನೋಡಿಕೊಂಡು ಉತ್ತಮವಾಗಿ ಕಾರ್ಯನಿರ್ವಹಿಸಬೇಕು’ ಎಂದು ಹೇಳಿದರು.

ಗೃಹರಕ್ಷಕರು ಪೊಲೀಸರ ಜೊತೆ ಕರ್ತವ್ಯ ನಿಷ್ಠೆ ಹಾಗೂ ಸಮಯಪ್ರಜ್ಞೆಯಿಂದ ಕಾರ್ಯನಿರ್ವಹಿಸುತ್ತಾರೆ, ಇದೊಂದು ರೀತಿ ಪರೋಪಕಾರದ ಕೆಲಸ ಎಂದರು.

ಗೃಹರಕ್ಷಕರಾಗಿ ಉತ್ತಮ ಸೇವೆ ಸಲ್ಲಿಸಿದ 10 ಮಂದಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮುಂಬಡ್ತಿ ಹೊಂದಿದ 8 ಮಂದಿ ಗೃಹರಕ್ಷಕನ್ನು ಹಾಗೂ ನಿವೃತ್ತರಾದ ಗೃಹರಕ್ಷಕರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ವಾರ್ತಾಧಿಕಾರಿ ಚಿನ್ನಸ್ವಾಮಿ, ಪೊಲೀಸ್ ಇನ್ಸ್ಪೆಕ್ಟರ್ ರವಿ, ಗೃಹರಕ್ಷಕದಳ ವಿಭಾಗದ ವಿಶ್ವನಾಥ, ಕವನ್ ಕುಮಾರ್, ಪುಟ್ಟರಾಜು, ತ್ಯಾಗರಾಜು, ಲೋಕೇಶ್ ಭಾಗವಹಿಸಿದ್ದರಯ. ಪ್ರಕೃತಿ ಮತ್ತು ತಂಡದವರು ಪ್ರಾರ್ಥಿಸಿದರು. ಗೃಹರಕ್ಷಕರಾದ ಮದಬ್ ಬೈರಗಿ ಸ್ವಾಗತಿಸಿದರು. ಕೆ.ಎಫ್.ಲವಿ ನಿರೂಪಿಸಿ, ವಂದಿಸಿದರು. ಸಭಾ ಕಾರ್ಯಕ್ರಮಕ್ಕೂ ಮೊದಲು ಗೃಹರಕ್ಷಕದಳದ ಪಿಎಸ್ಐ ಅಕ್ಷಯ್ ಕುಮಾರ್ ಅವರು ಗೌರವ ವಂದನೆ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.