ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪಂಜಿನ ಮೆರವಣಿಗೆ; ವಿವಿಧೆಡೆ ಮದ್ಯ ಮಾರಾಟ ನಿಷೇಧ

Published : 9 ಆಗಸ್ಟ್ 2024, 8:54 IST
Last Updated : 9 ಆಗಸ್ಟ್ 2024, 8:54 IST
ಫಾಲೋ ಮಾಡಿ
Comments

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಹಲವೆಡೆ ನಡೆಯಲಿರುವ ಪಂಜಿನ ಮೆರವಣಿಗೆ ಪ್ರಯುಕ್ತ ವಿವಿಧೆಡೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆದೇಶ ಹೊರಡಿಸಿದ್ದಾರೆ.

ಆಗಸ್ಟ್ 9ರಂದು ಬೆಳಿಗ್ಗೆ 6 ಗಂಟೆಯಿಂದ 10ರಂದು ಬೆಳಿಗ್ಗೆ 6 ಗಂಟೆಯವರೆಗೆ ಮಡಿಕೇರಿ ನಗರ ಹಾಗೂ ಸುತ್ತಮುತ್ತಲಿನ 10 ಕಿ.ಮೀ ಪ್ರದೇಶದಲ್ಲಿ, ಆ. 10ರಂದು ಬೆಳಿಗ್ಗೆ 6 ಗಂಟೆಯಿಂದ 11ರಂದು ಬೆಳಿಗ್ಗೆ 6 ಗಂಟೆಯವರೆಗೆ ಮಾದಾಪುರ ಹಾಗೂ ಸುತ್ತಮುತ್ತಲಿನ 10 ಕಿ.ಮೀ ವ್ಯಾಪ್ತಿಯ ಪ್ರದೇಶದಲ್ಲಿ, ಆ.11ರಂದು ಬೆಳಿಗ್ಗೆ 6 ಗಂಟೆಯಿಂದ 12ರಂದು ಬೆಳಿಗ್ಗೆ 6 ಗಂಟೆಯವರೆಗೆ ಶನಿವಾರಸಂತೆ ಹಾಗೂ ಕೊಡ್ಲಿಪೇಟೆ ಪಟ್ಟಣ ಹಾಗೂ ಸುತ್ತಮುತ್ತಲಿನ 10 ಕಿ.ಮೀ ವ್ಯಾಪ್ತಿಯ ಪ್ರದೇಶದಲ್ಲಿ ಎಲ್ಲ ರೀತಿಯ ಮದ್ಯದಂಗಡಿ, ಬಾರ್, ಹೋಟೆಲ್ ಮತ್ತು ಕ್ಲಬ್‌ಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT