ಶುಕ್ರವಾರ, ಸೆಪ್ಟೆಂಬರ್ 25, 2020
24 °C

ನಾಪೋಕ್ಲು: ಕುಡಿದ ಮತ್ತಿನಲ್ಲಿ ತಂದೆ- ತಾಯಿಯ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನಾಪೋಕ್ಲು: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಹೆತ್ತ ತಂದೆ– ತಾಯಿಯನ್ನು ದೊಣ್ಣೆಯಿಂದ ಥಳಿಸಿ ಹತ್ಯೆ ಮಾಡಿದ ಧಾರುಣ ಘಟನೆ ಇಲ್ಲಿಗೆ ಸಮೀಪದ ಕೋಕೇರಿ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.

ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಕೇರಿ ಗ್ರಾಮದ ಕಾಫಿ ಬೆಳೆಗಾರ ಚೇನಂಡ ಶಿವಾಜಿ ಸೋಮಯ್ಯನವರ ಲೈನ್ ಮನೆಯ ನಿವಾಸಿ ಅಯ್ಯಪ್ಪ (26) ಎಂಬಾತ ಕುಡಿದ ಅಮಲಿನಲ್ಲಿ ತನ್ನ ತಂದೆ– ತಾಯಿಯನ್ನು ದೊಣ್ಣೆಯಿಂದ ಥಳಿಸಿದ್ದಾನೆ. ವಾಸವಾಗಿದ್ದ ಎರವರ ರಾಜು (65) ಮತ್ತು ಗೌರಿ (60) ಸ್ಥಳದಲ್ಲೇ ಮೃಥಪಟ್ಟಿದ್ದಾರೆ.

ತೋಟದ ಮಾಲೀಕ ಮಂಗಳವಾರ ಬೆಳಿಗ್ಗೆ ಕೆಲಸಕ್ಕೆ ಕಾರ್ಮಿಕರನ್ನು ಕರೆಯಲು ಹೋದಾಗ ಈ ಘಟನೆ ಬೆಳಕಿಗೆ ಬಂದಿದೆ. ಅವರು ನಾಪೋಕ್ಲು ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ನಾಪೋಕ್ಲು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸ್ಥಳಕ್ಕೆ ಮಡಿಕೇರಿ ಡಿವೈಎಸ್‌ಪಿ ದಿನೇಶ್ ಕುಮಾರ್, ಗ್ರಾಮಾಂತರ ಠಾಣಾ ಸಿಪಿಐ ದಿವಾಕರ್, ಪಿಎಸ್‌ಐ ಆರ್.ಕಿರಣ್, ಸಿಬ್ಬಂದಿ ಭೇಟಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು