ಮಡಿಕೇರಿ: ಪೊನ್ನಂಪೇಟೆ ತಾಲ್ಲೂಕಿನ ಮುಗಟಗೇರಿ ಗ್ರಾಮದ ಕಾಫಿ ತೋಟದ ಲೈನ್‌ಮನೆಯಲ್ಲಿ ಮಲಗಿದ್ದ ವೇಳೆ ಪೆಟ್ರೋಲ್ ಸುರಿದು ಮನೆಗೆ ಬೆಂಕಿ ಹಚ್ಚಿದರಿಂದ ಮೂವರು ಸಜೀವ ದಹನವಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಪೊನ್ನಂಪೇಟೆ ಠಾಣಾ ವ್ಯಾಪ್ತಿಯ ಕೋಳೆರ ಚಿಟ್ಟಿಯಪ್ಪ ಅವರ ಲೈನ್‌ಮನೆಯಲ್ಲಿ ವಾಸವಾಗಿದ್ದ ಪಣಿ ಎರವರ ಸೀತೆ (46), ಬೇಬಿ (40) ಹಾಗೂ ಪ್ರಾರ್ಥನಾ (6) ಸಜೀವ ದಹನವಾದವರು.

ಬೋಜ ಮತ್ತು ಅವರ ಪತ್ನಿಯ ನಡುವೆ ಮದ್ಯದ ಅಮಲಿನಲ್ಲಿ ಶುಕ್ರವಾರ ರಾತ್ರಿ ಜಗಳ ನಡೆದಿದೆ. ಬಳಿಕ ಮಧ್ಯ ರಾತ್ರಿ ಬೋಜ ಲೈನ್‌ಮನೆಯ ಮೇಲೆ ಹತ್ತಿ ಪೆಟ್ರೋಲ್ ಅನ್ನು ಮನೆಯ ಮೇಲೆ ಸುರಿದು ಬೆಂಕಿ ಹಚ್ಚಿದ್ದರಿಂದ ಮೂವರು ಸಜೀವ ದಹನವಾಗಿದ್ದಾರೆ. ಲೈನ್ ಮನೆಯಲ್ಲಿ ಎಂಟು ಮಂದಿ ನಿದ್ರಿಸುತ್ತಿದ್ದರು. ಈ ವೇಳೆ ಘಟನೆ ನಡೆದಿದೆ.

ಗಾಯಗೊಂಡವರನ್ನು ಮೈಸೂರು ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸ್ಥಳಕ್ಕೆ ಪೊನ್ನಂಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.