ಪರಿಸರ ಸ್ನೇಹಿ ದೀಪಾವಳಿಗೆ ಕರೆ

7
ಕೊಡಗಿನಲ್ಲಿ ಜಾಗೃತಿ ಆಂದೋಲನಕ್ಕೆ ಚಾಲನೆ

ಪರಿಸರ ಸ್ನೇಹಿ ದೀಪಾವಳಿಗೆ ಕರೆ

Published:
Updated:
Deccan Herald

ಮಡಿಕೇರಿ: ‘ಪಟಾಕಿ ಸುಡುವುದರಿಂದ ವಾಯುಮಾಲಿನ್ಯ ಮತ್ತು ಶಬ್ದ ಮಾಲಿನ್ಯ ಆಗಲಿದ್ದು ಪರಿಸರ ಸ್ನೇಹಿ ದೀಪಾವಳಿ ಆಚರಿಸಿ’ ಎಂದು ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಕರೆ ನೀಡಿದರು.

ನಗರದ ಸೇಂಟ್‌ ಮೈಕಲರ ಪ್ರೌಢಶಾಲೆಯಲ್ಲಿ ಶನಿವಾರ ಜಿಲ್ಲಾಡಳಿತ ಹಾಗೂ ರಾಜ್ಯ ವಿಜ್ಞಾನ ಪರಿಷತ್‌ ಜಿಲ್ಲಾ ಸಮಿತಿ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಪರಿಸರ ಸ್ನೇಹಿ ಹಸಿರು ದೀಪಾವಳಿ ಆಚರಣೆಯ ಜಾಗೃತಿ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಪಟಾಕಿ ಸಿಡಿಸುವುದರಿಂದ ಪರಿಸರ ಮಾಲಿನ್ಯ ಉಂಟಾಗುವುದರ ಜತೆಗೆ ಆಸ್ತಮಾ, ಮಿದುಳುಜ್ವರ, ಹೃದಯಾಘಾತ ಆಗಲಿದೆ. ಈ ಬಗ್ಗೆ  ಪ್ರತಿಯೊಬ್ಬರು ಎಚ್ಚರಿಕೆ ವಹಿಸಬೇಕು. ಈ ಬಾರಿ ದೀಪಾವಳಿ ಆಚರಣೆಯನ್ನು ಪರಿಸರ ಸ್ನೇಹಿಯಾಗಿ ಆಚರಿಸಿ’ ಎಂದು ಸಲಹೆ ಮಾಡಿದರು.

ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಚ್ಚಾದೊ ಮಾತನಾಡಿ, ‘ಪರಿಸರ ಸಂರಕ್ಷಣೆ ಎಲ್ಲರ ಹೊಣೆ; ಉತ್ತಮ ಪರಿಸರ ಕಾಪಾಡುವುದು, ಆರೋಗ್ಯಯುತ ಜೀವನದ ಬಗ್ಗೆ ಪ್ರತಿಯೊಬ್ಬರೂ ಹಣತೆ ಹಚ್ಚಬೇಕು’ ಎಂದು ಹೇಳಿದರು.

ಜಿಲ್ಲಾ ಪರಿಸರಾಧಿಕಾರಿ ಜಿ.ಆರ್.ಗಣೇಶನ್ ಪ್ರಾಸ್ತಾವಿಕ ಮಾತನಾಡಿ, ‘ಪರಿಸರ ಸಂರಕ್ಷಣೆ ಮಾಡಿದ್ದಲ್ಲಿ ಹೆಚ್ಚಿನ ಆರೋಗ್ಯ ಕಾಣಬಹುದು, ಇಲ್ಲದಿದ್ದಲ್ಲಿ ಹಲವು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.  

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಮಾತನಾಡಿ, ಸೇಂಟ್‌ ಮೈಕಲರ ಶಾಲೆಯ ಮುಖ್ಯಸ್ಥರಾದ ನವೀನ್ ಕುಮಾರ್, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆಂಚಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ, ಸ್ಕೌಟ್ಸ್ ಮತ್ತು ಗೈಡ್ಸ್ ಆಯುಕ್ತ ಜಿಮ್ಮಿ ಸೀಕ್ವೆರಾ, ವಿಜ್ಞಾನ ಪರಿಷತ್‌ ಜಿಲ್ಲಾ ಸಮಿತಿ ಉಪಾಧ್ಯಕ್ಷ ಎಂ.ಇ. ಮೊಹಿದ್ದೀನ್, ವೆಂಕಟನಾಯಕ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !