ಮಡಿಕೇರಿ: ಪ್ರಧಾನಮಂತ್ರಿ ಅವರ ‘ವಿಶ್ವಕರ್ಮ’ ಯೋಜನೆಯಡಿ ಕೌಶಲ ಅಭಿವೃದ್ಧಿ ತರಬೇತಿ ಪಡೆದವರು ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳುತ್ತಿದ್ದಾರೆಯೇ, ಸರ್ಕಾರದ ಕಾರ್ಯಕ್ರಮ ಉಪಯೋಗ ಆಗುತ್ತಿದೆಯೇ ಎಂಬ ಬಗ್ಗೆ ಪರಿಶೀಲಿಸಬೇಕು ಹಾಗೂ ಮಾಹಿತಿ ಒದಗಿಸಬೇಕು ಎಂದು ‘ವಿಶ್ವಕರ್ಮ’ ಯೋಜನೆ ಸಮಿತಿ ಸದಸ್ಯ ನಾಗೇಶ್ ಕುಂದಲ್ಪಾಡಿ ಅಧಿಕಾರಿಗಳನ್ನು ಒತ್ತಾಯಿಸಿದರು.

ಇಲ್ಲಿ ಗುರುವಾರ ನಡೆದ ‘ವಿಶ್ವಕರ್ಮ’ ಯೋಜನೆ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು, ‘ಸಮಿತಿ ಸದಸ್ಯರಿಗೆ ಕಾಲ ಕಾಲಕ್ಕೆ ಮಾಹಿತಿ ನೀಡಬೇಕು. ಸರ್ಕಾರದ ಕಾರ್ಯಕ್ರಮಗಳು ಅರ್ಹರಿಗೆ ತಲುಪುತ್ತಿವೆಯೇ ಎಂಬ ಬಗ್ಗೆ ತಿಳಿಸಬೇಕು’ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕೌಶಲ್ಯ ಅಭಿವೃದ್ಧಿ ಯೋಜನೆಯಿಂದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿ ಕೌಶಲ್ಯ ತರಬೇತಿ ಪಡೆದಿರುವ ಬಗ್ಗೆ ಮಾಹಿತಿ ನೀಡುವಂತೆ ಹೇಳಿದರು.

ಈ ಕುರಿತು ಮಾಹಿತಿ ನೀಡಿದ ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಕೆ.ಹನುಮಂತರಾಯ, ‘ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿ ಟೈಲರ್, ಕಾರ್ಪೆಂಟರ್, ಲಾಂಡ್ರಿ ವರ್ಕರ್ಸ್, ಗಾರ್ಮೆಂಟ್ಸ್ ಮೇಕರ್, ಡಾಲ್ ಅಂಡ್ ಟಾಯ್ ಮೇಕರ್, ಮೆಟಲ್ ಸ್ಮಿತ್, ಬೋಟ್ ಮೇಕರ್ ಮತ್ತಿತರ ಕಾರ್ಯಕ್ರಮದಡಿ ತರಬೇತಿ ನೀಡಲಾಗಿದೆ’ ಎಂದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 419 ಅರ್ಜಿ ಸ್ವೀಕರಿಸಲಾಗಿದ್ದು, 111 ಅರ್ಜಿಗಳನ್ನು ಅಂಗೀಕರಿಸಲಾಗಿದೆ. 307 ಅರ್ಜಿಗಳು ವಿವಿಧ ಹಂತದಲ್ಲಿ ಬಾಕಿ ಇದ್ದು, 1 ಅರ್ಜಿ ತಿರಸ್ಕೃತಗೊಂಡಿದೆ ಎಂದು ಹೇಳಿದರು.

ಸಭೆಯಲ್ಲಿ ಕೆಎಸ್ಎಸ್ಐಡಿಸಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಟಿ.ವೇದಾವತಿ, ಕೆಐಎಡಿಬಿ ಮಾಧುಸ್ವಾಮಿ, ನಗರಸಭೆ ಪೌರಾಯುಕ್ತ ಎಚ್.ಆರ್.ರಮೇಶ್, ಸಣ್ಣ ಕೈಗಾರಿಕಾ ಘಟಕಗಳ ಅಧ್ಯಕ್ಷ ಕೆ.ಎ.ಸಂದೀಪ್ ಕುಮಾರ್, ಕೊಡಗು ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಬಿ.ಆರ್.ನಾಗೇಂದ್ರ ಪ್ರಸಾದ್, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಚಂದ್ರಶೇಖರ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.