ಮಡಿಕೇರಿ: ಪ್ರಕೃತಿ ವಿಕೋಪ ಉಂಟಾದರೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಪೊಲೀಸ್ ಅಧಿಕಾರಿಗಳೊಂದಿಗೆ ಮಂಗಳವಾರ ವಿಡಿಯೊ ಸಂವಾದ ನಡೆಸಿದರು.

ಈ ವಿಡಿಯೊ ಸಂವಾದದಲ್ಲಿ ಜಿಲ್ಲೆ ಎಲ್ಲಾ ಡಿವೈಎಸ್ಪಿ, ಸರ್ಕಲ್ ಇನ್ಸ್ಪೆಕ್ಟರ್ಗಳು, ಇನ್ಸ್ಪೆಕ್ಟರ್ಗಳು, ಸಬ್ಇನ್ಸ್ಪೆಕ್ಟರ್ಗಳು ಭಾಗಿಯಾಗಿದ್ದರು.

ಈ ವೇಳೆ ಮಾತನಾಡಿದ ಅವರು, ‘ಕೊಡಗು ಜಿಲ್ಲೆಯಲ್ಲಿ ಹಲವು ವರ್ಷಗಳ ನಂತರ ಜೂನ್ ತಿಂಗಳ ಅಂತ್ಯದವರೆಗೆ ಅತೀ ಹೆಚ್ಚು ಮಳೆಯಾಗಿದೆ ಹಾಗೂ ಈ ವರ್ಷವೂ ಅತೀ ಹೆಚ್ಚು ಮಳೆಯಾಗುತ್ತಿರುವುದರಿಂದ ಜಿಲ್ಲೆಯಲ್ಲಿನ ನದಿ, ಜಲಾಶಯ, ಕೆರೆ, ತೋಡು, ಹಳ್ಳ ಇತರೇ ನೀರಿನ ಮೂಲಗಳು ಈಗಾಗಲೇ ತುಂಬಿ ಹರಿಯುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ. ಆದ್ದರಿಂದ ಯಾವುದೇ ರೀತಿಯ ಪ್ರಕೃತಿ ವಿಕೋಪ ಉಂಟಾದಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.

‘ಠಾಣೆ ಹಾಗೂ ಗ್ರಾಮ ಬೀಟ್ ವ್ಯಾಪ್ತಿಯಲ್ಲಿ ಸ್ವಯಂಸೇವಕರನ್ನು ಗುರುತಿಸಿ ಅವರ ಹೆಸರು, ವಿಳಾಸ, ಠಾಣೆ ಹೆಸರು, ಮೊಬೈಲ್ ಸಂಖ್ಯೆ ಸೇರಿದಂತೆ ವಿವರಗಳನ್ನು ಸಂಗ್ರಹಿಸಬೇಕು. ಪ್ರಕೃತಿ ವಿಕೋಪದ ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರ ರಕ್ಷಣೆಗೆ ಸನ್ನದ್ದರಾಗಿರುವ ನಿಟ್ಟಿನಲ್ಲಿ ಮತ್ತು ಕೈಗೊಳ್ಳಬೇಕಾದ ತುರ್ತು ಕ್ರಮಗಳ ಕುರಿತು ಸ್ವಯಂಸೇವಕರೊಂದಿಗೆ ಠಾಣಾ ಮಟ್ಟದಲ್ಲಿ ಸಭೆಯನ್ನು ನಡೆಸಿ ಸೂಕ್ತ ಸಲಹೆ ನೀಡಬೇಕು’ ಎಂದು ನಿರ್ದೇಶನ ನೀಡಿದರು.

ಠಾಣಾ ವ್ಯಾಪ್ತಿಯಲ್ಲಿ ಲಭ್ಯವಿರುವ ಜೆಸಿಬಿ, ಕ್ರೇನ್, ಟೋಯಿಂಗ್ ವಾಹನ, ವುಡ್ ಕಟ್ಟರ್, 4x4 ಜೀಪ್ಗಳ ವಿವರ ಹಾಗೂ ಅವರ ಹೆಸರು, ವಿಳಾಸ, ಠಾಣೆ ಹೆಸರು, ಮೊಬೈಲ್ ಸಂಖ್ಯೆ ವಿವರಗಳನ್ನು ಸಂಗ್ರಹಿಸಿರಬೇಕು. ಪ್ರಕೃತಿ ವಿಕೋಪದ ತುರ್ತು ಸಂದರ್ಭಗಳಲ್ಲಿ ವಿವಿಧ ಸಂಘನೆಯ ಸ್ವಯಂಸೇವಕರು ಮತ್ತು ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಕೈಜೋಡಿಸುವಂತೆ ಅವರು ಹೇಳಿದರು.

ಮಾಹಿತಿ ನೀಡಲು ಮನವಿ

‘ಸಾರ್ವಜನಿಕರು ಪ್ರಕೃತಿ ವಿಕೋಪದ ತುರ್ತು ಸಂದರ್ಭಗಳಲ್ಲಿ ಪ್ರಕೃತಿ ವಿಕೋಪ ಉಂಟಾದ ಸ್ಥಳ ಹಾಗೂ ನೆರವಿನ ಅವಶ್ಯಕತೆ ಕುರಿತು ಕೊಡಗು ಜಿಲ್ಲಾ ಪೊಲೀಸ್ ಕಚೇರಿಯ ಮೊ: 8277958444ಗೆ ಮಾಹಿತಿ ನೀಡಬೇಕು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಮನವಿ ಮಾಡಿದ್ದಾರೆ.

ಪ್ರಕೃತಿ ವಿಕೋಪದ ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರ ರಕ್ಷಣೆಯಲ್ಲಿ ಪಾಲ್ಗೋಳ್ಳಲು ಇಚ್ಛೆಯುಳ್ಳವರು ತಮ್ಮ ಹೆಸರು ವಿಳಾಸ ಠಾಣೆ ಹೆಸರು ಮೊಬೈಲ್ ಸಂಖ್ಯೆ ವಿವರಗಳನ್ನು ಕೊಡಗು ಜಿಲ್ಲಾ ಪೊಲೀಸ್ ಕಚೇರಿಯ ಮೊ: 8277958444ಗೆ ನೇರವಾಗಿ ನೀಡುವಂತೆ ಅವರು ಕೋರಿದ್ದಾರೆ. ಹಾಗೂ ತಮ್ಮವಿವರಗಳನ್ನು ಸ್ಥಳೀಯ ಪೊಲೀಸ್ ಠಾಣೆಗೆ ನೀಡಿ ಸ್ವಯಂಸೇವಕರ ಪಟ್ಟಿಯಲ್ಲಿ ಸೇರಿಸಿಕೊಂಡು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸುವಂತೆ ಸೂಚಿಸಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.