ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರಳು ಅಕ್ರಮ ಅಡ್ಡೆ ಮೇಲೆ ಪೊಲೀಸ್ ದಾಳಿ

Last Updated 13 ಡಿಸೆಂಬರ್ 2019, 17:30 IST
ಅಕ್ಷರ ಗಾತ್ರ

ಸಿದ್ದಾಪುರ: ಕಾವೇರಿ ನದಿಯಿಂದ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಸಂದರ್ಭ ಪೊಲೀಸರು ದಾಳಿ ನಡೆಸಿ, ವಾಹನದೊಂದಿಗೆ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.

ಕೊಂಡಂಗೇರಿಯ ಏಲಿಯಂಗಾಡ್ ನಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಸುಳಿವಿನ ಮೇರೆಗೆ ದಾಳಿ ನಡೆಸಿದ ಸಿದ್ದಾಪುರ ಪೊಲೀಸರು, ಪಿಕ್ ಅಪ್ ಜೀಪು ಹಾಗೂ ಆರೋಪಿ ರಶೀದ್ ನನ್ನು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬ್ದುಲ್ ರಹಮಾನ್ ಹಾಗೂ ಇಸಾಕ್ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ಕೊಂಡಂಗೇರಿಯ ಕೊಪ್ಪ ರಸ್ತೆಯ ಬಳಿಯಲ್ಲಿ ಕಾವೇರಿ ನದಿಯಲ್ಲಿ ಮರಳು ಅಕ್ರಮವಾಗಿ ಸಾಗಾಟಕ್ಕೆ ಮುಂದಾಗಿದ್ದ ಸಂದರ್ಭ ಪೊಲೀಸರು ದಾಳಿ ನಡೆಸಿದ್ದಾರೆ. ಪಿಕ್ ಅಪ್ ಜೀಪ್ ನೊಂದಿಗೆ ಆರೋಪಿಗಳು ಪರಾರಿಯಾಗಿದ್ದು, ಮರಳು ದೋಚಲು ಬಳಸಿದ್ದ ಸಾಮಾಗ್ರಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಸಿರಾಜ್ ಹಾಗೂ ಲತೀಫ್ ವಿರುದ್ಧ ಪ್ರಕರಣ ದಾಖಲಾಗಿದೆ.

ಕಾರ್ಯಾಚರಣೆಯಲ್ಲಿ ಠಾಣಾಧಿಕಾರಿ ಬೋಜಪ್ಪ ನೇತೃತ್ವದಲ್ಲಿ ಮುಖ್ಯ ಪೇದೆ ಪಿ.ಟಿ ಶ್ರೀನಿವಾಸ್, ಪ್ರಬಾರ ಠಾಣಾಧಿಕಾರಿ ದೋಲ್ ಶೆಟ್ಟಿ, ಸಿಬ್ಬಂಧಿಗಳಾದ ಮಲ್ಲಪ್ಪ ಮುಗೆಶೀರ್, ವಸಂತ್ ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT