ಬುಧವಾರ, ಜೂನ್ 16, 2021
27 °C

ಮಡಿಕೇರಿ ನಗರಸಭೆ: ಬಿಜೆಪಿಗೆ ಭರ್ಜರಿ ಗೆಲುವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಇಲ್ಲಿನ ನಗರಸಭೆಯ 23 ವಾರ್ಡ್‌ಗೆ ನಡೆದಿದ್ದ ಚುನಾವಣೆಯಲ್ಲಿ ಬಿಜೆಪಿಯು‌ ಭರ್ಜರಿ ಗೆಲುವು ದಾಖಲಿಸಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್‌ಗೆ ತೀವ್ರ ಮುಖಭಂಗವಾಗಿದೆ. ನಗರಸಭೆ ಆಡಳಿತವು ಬಿಜೆಪಿ ಪಾಲಾಗಿದೆ. ಹಿಂದಿನ ಅವಧಿಯಲ್ಲಿ, ಕಾಂಗ್ರೆಸ್ ಹಾಗೂ ಎಸ್‌ಡಿಪಿಐ ಮೈತ್ರಿ ಕೂಟವು ಅಧಿಕಾರದಲ್ಲಿತ್ತು.

ಒಟ್ಟು 23 ವಾರ್ಡ್‌ಗಳಲ್ಲಿ ಬಿಜೆಪಿಯ ಅಭ್ಯರ್ಥಿಗಳು 16 ವಾರ್ಡ್‌ನಲ್ಲಿ ಗೆದ್ದಿದ್ದಾರೆ. ಜೆಡಿಎಸ್ ಹಾಗೂ ಕಾಂಗ್ರೆಸ್ ತಲಾ ಒಂದು ವಾರ್ಡ್‌ನಲ್ಲಿ ಜಯ ಗಳಿಸಿದೆ.

ಎಸ್‌ಡಿಪಿಐ ಐದು ವಾರ್ಡ್‌ನಲ್ಲಿ ಗೆದ್ದು ಬೀಗಿದೆ. ಒಟ್ಟು 26 ಮಂದಿ ಪಕ್ಷೇತರರು ಸ್ಪರ್ಧಿಸಿದ್ದರು. ಎಲ್ಲರೂ ನಿರಾಸೆ ಅನುಭವಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು