ಮಡಿಕೇರಿ: ಪೊನ್ನಂಪೇಟೆ ತಾಲ್ಲೂಕಾಗಿ 6 ವರ್ಷಗಳು ಕಳೆದ ನಂತರ ‘ಪ್ರಜಾಸೌಧ’ದ ಕನಸೊಂದು ನನಸಾಗುವತ್ತ ಅಡಿ ಇಟ್ಟಿತು.

ಪೊನ್ನಂಪೇಟೆಯಲ್ಲಿ ₹ 8.60 ಕೋಟಿ ವೆಚ್ಚದ ‘ಪ್ರಜಾ ಸೌಧ’ ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಕಂದಾಯ ಖಾತೆ ಸಚಿವ ಕೃಷ್ಣ ಬೈರೇಗೌಡ ಹಾಗೂ ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರು ಶುಕ್ರವಾರ ಭೂಮಿಪೂಜೆ ನೆರವೇರಿಸುವ ಮೂಲಕ ಈ ಕನಸಿಗೆ ನೀರೆರೆದರು.

ಬಳಿಕ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ, ‘ಪೊನ್ನಂಪೇಟೆ ನೂತನ ತಾಲ್ಲೂಕು ರಚನೆಯಾಗಿ 6 ವರ್ಷ ಕಳೆದಿದೆ. ಬಹಳ ಹಿಂದೆಯೇ ತಾಲ್ಲೂಕು ಆಡಳಿತ ಕಚೇರಿ ನಿರ್ಮಾಣ ಆಗಬೇಕಿತ್ತು, ಆದರೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆಡಳಿತ ಭವನ ನಿರ್ಮಾಣಕ್ಕೆ ಅನುಮೋದನೆ ನೀಡಿದೆ’ ಎಂದು ಹೇಳಿದರು.

‘ಈ ಹಿಂದೆ ಸರ್ಕಾರ 63 ಹೊಸ ತಾಲ್ಲೂಕುಗಳನ್ನು ರಚಿಸಿ ಕೇವಲ 14 ಹೊಸ ತಾಲ್ಲೂಕುಗಳಲ್ಲಿ ಮಾತ್ರವೇ ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಅನುಮೋದನೆ ನೀಡಿತ್ತು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಳೆದ 2 ವರ್ಷದಲ್ಲಿ, 49 ಹೊಸ ತಾಲ್ಲೂಕುಗಳಲ್ಲಿ ಪ್ರಜಾಸೌಧ ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಮಂಜೂರಾತಿ ನೀಡಿ ಆದೇಶಿಸಿದೆ’ ಎಂದು ತಿಳಿಸಿದರು.

ಹೊಸ ತಾಲ್ಲೂಕುಗಳಲ್ಲಿ ಪ್ರಜಾಸೌಧ ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಸರ್ಕಾರ ತಲಾ ₹ 8.60 ಕೋಟಿಯನ್ನು ಬಿಡುಗಡೆ ಮಾಡಿದ್ದು, ಎಲ್ಲೆಡೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಪ್ರಜಾಸೌಧ ಕಟ್ಟಡವನ್ನು 17 ಸಾವಿರ ಚದರ ಅಡಿಗಳಷ್ಟು ವ್ಯಾಪ್ತಿಯಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಈಗ ನೆಲ ಮಹಡಿ ಹಾಗೂ ಮೊದಲ ಅರ್ಧ ಮಹಡಿಯು ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ಮುಂದಿನ ದಿನಗಳಲ್ಲಿ 4 ಅಂತಸ್ತಿನವರೆಗೂ ಕಟ್ಟಡ ನಿರ್ಮಾಣ ಮಾಡಬಹುದಾಗಿದೆ ಎಂದು ಸಚಿವರು ಹೇಳಿದರು.

ಭೂಕುಸಿತ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಭೂಕುಸಿತವಾಗುವುದನ್ನು ತಡೆಯಲು ₹ 60 ಕೋಟಿ ವೆಚ್ಚದಲ್ಲಿ ತಡೆಗೋಡೆ, ಸೇತುವೆ ಮತ್ತಿತರ ಕಾಮಗಾರಿ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್.ಅರುಣ್ ಮಾಚಯ್ಯ, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಣ್ಣೀರ ಹರೀಶ್, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ತಾಲ್ಲೂಕು ಘಟಕದ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಮುಖಂಡರಾದ ಎ4ಚ್.ಡಿ.ಗಣೇಶ್, ಕೃಷ್ಣಪ್ಪ, ಅಬ್ದುಲ್ಲಾ ಭಾಗವಹಿಸಿದ್ದರು.

ರಸ್ತೆ ಹೆಸರಿನಲ್ಲಿ ಜನರ ದಾರಿ ತಪ್ಪಿಸಬೇಡಿ; ಪೊನ್ನಣ್ಣ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಮಾತನಾಡಿ ‘ರಸ್ತೆ ಹೆಸರಿನಲ್ಲಿ ಜನರ ದಾರಿ ತಪ್ಪಿಸುವ ಕೆಲಸ ಯಾರೂ ಸಹ ಮಾಡಬಾರದು’ ಎಂದು ಹೇಳಿದರು. ಈ ವರ್ಷ ಮೇ ಕೊನೆ ವಾರದಿಂದ ನವೆಂಬರ್ ಮೊದಲ ವಾರದವರೆಗೂ ಮಳೆ ಸುರಿದ ಪರಿಣಾಮ ರಸ್ತೆಗಳು ಗುಂಡಿಯಾಗಿವೆ. ಈಗ ರಸ್ತೆ ಸರಿಪಡಿಸುವ ಕಾರ್ಯ ಕೈಗೆತ್ತಿಕೊಳ್ಳಲಾಗುವುದು. ಈ ಕಾರ್ಯಕ್ಕೆ ಕಾಲಾವಕಾಶ ಬೇಕಿದೆ ಎಂದರು. ಸರ್ಕಾರ ಆರ್ಥಿಕ ಶಿಸ್ತನ್ನು ಕಾಪಾಡಿಕೊಂಡು ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದೆ. ಪ್ರಜಾಸೌಧ ಆಡಳಿತ ಭವನವನ್ನು ದೂರದೃಷ್ಟಿಯಿಂದ ನಿರ್ಮಾಣ ಮಾಡಲಾಗುತ್ತದೆ. ಪೊನ್ನಂಪೇಟೆಯ ಸಾರ್ವಜನಿಕರ ಸ್ಪಂದನೆಯಂತೆ ಸೂಕ್ತ ಸ್ಥಳದಲ್ಲಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಿದರು.

‘ವಿರಾಜಪೇಟೆ ತಾಲ್ಲೂಕು ಆಸ್ಪತ್ರೆಯನ್ನು ಜಿಲ್ಲಾ ಆಸ್ಪತ್ರೆಯನ್ನಾಗಿ ಹಾಗೂ ಗೋಣಿಕೊಪ್ಪಲು ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲಾಗುತ್ತಿರುವುದನ್ನು ಪ್ರಸ್ತಾಪಿಸಿದ ಅವರು ಕಳೆದ ಎರಡೂವರೆ ವರ್ಷಗಳಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಮಾತನಾಡಿದರು. ಇವುಗಳ ಜೊತೆಗೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದ ನಿವೇಶನ ರಹಿತ 2 ಸಾವಿರ ಕುಟುಂಬದವರಿಗೆ ಹಕ್ಕುಪತ್ರ ನೀಡಲು ಮುಂದಾಗಲಾಗಿದೆ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಲಾಗುವುದು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.