ಸೋಮವಾರ, ಅಕ್ಟೋಬರ್ 18, 2021
22 °C
ಪೊನ್ನಂಪೇಟೆ ಕ್ರೀಡಾ ಶಾಲೆ ವಿದ್ಯಾರ್ಥಿಗೆ ಹಾಕಿ ಸ್ಟಿಕ್‌ನಿಂದ ಥಳಿತ

ತಡವಾಗಿ ಬಂದದ್ದಕ್ಕೆ ಪೊನ್ನಂಪೇಟೆ ಕ್ರೀಡಾ ಶಾಲೆ ವಿದ್ಯಾರ್ಥಿ ಮುಂಗೈ ಮುರಿದ ಕೋಚ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗೋಣಿಕೊಪ್ಪಲು: ಪೊನ್ನಂಪೇಟೆ ಕ್ರೀಡಾ ವಸತಿ ಶಾಲೆಯ ತರಬೇತುದಾರ ಬುಟ್ಟಿಯಂಡ ಚಂಗಪ್ಪ ಅವರು ಸೋಮವಾರ ಹಾಕಿ ಸ್ಟಿಕ್‌ನಿಂದ ಥಳಿಸಿದ್ದರಿಂದ ತಮ್ಮ ಮಗ, ಹಾಕಿ ವಿದ್ಯಾರ್ಥಿ ವಿಫುಲ್ ಉತ್ತಪ್ಪನ (13) ಮುಂಗೈ ಮುರಿದಿದೆ ಎಂದು ಪೋಷಕರು ದೂರಿದ್ದಾರೆ.

‘ತರಬೇತಿ ಸಮಯಕ್ಕೆ ಸರಿಯಾಗಿ ಹಾಜರಾಗುತ್ತಿರಲಿಲ್ಲ ಎಂಬ ಕಾರಣಕ್ಕೆ ಥಳಿಸಿದ್ದಾರೆ. ಬಲಗೈಗೆ ತೀವ್ರ ಪೆಟ್ಟು ಬಿದ್ದಿದ್ದು ಮುಂಗೈ ಮೂಳೆ ಮುರಿದಿರುವುದು ಎಕ್ಸರೇಯಿಂದ ಪತ್ತೆಯಾಗಿದೆ’ ಎಂದು ಪೋಷಕ ಉತ್ತಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತರಬೇತುದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

ವಸತಿ ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಬೀಳಗಿ ಭೇಟಿ ನೀಡಿ ಪರಿಶೀಲಿಸಿದರು. ‘ಘಟನೆ ಬಗ್ಗೆ ವರದಿ ಪಡೆದು ಕ್ರಮ ಕೈಗೊಳ್ಳಲಾಗುವುದು ’ಎಂದು ಹೇಳಿದರು. ‘ಉದ್ದೇಶ ಪೂರ್ವಕವಾಗಿ ವಿದ್ಯಾರ್ಥಿಯನ್ನು ಥಳಿಸಿಲ್ಲ. ಅದು ಆಕಸ್ಮಿವಾಗಿ ನಡೆದ ಘಟನೆ’ ಎಂದು ತರಬೇತುದಾರ ಪ್ರತಿಕ್ರಿಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು