ಗೋಣಿಕೊಪ್ಪಲು: ಪೊನ್ನಂಪೇಟೆ ತಾಲ್ಲೂಕಿನ ಹುದಿಕೇರಿಯಲ್ಲಿ ಶನಿವಾರ ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಹಾಗೂ ಶಾಸಕ ಎ.ಎಸ್.ಪೊನ್ನಣ್ಣ ಅವರು ವಿದ್ಯುತ್ ಉಪಕೇಂದ್ರ ಸ್ಥಾಪನೆಗೆ ಭೂಮಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ‘ನಾನು ಈ ಹಿಂದೆ ಕ್ಷೇತ್ರದ ಜನತೆಗೆ ನೀಡಿದ ಭರವಸೆಯಂತೆ ನಡೆಯುತ್ತಿರುವೆ. ಈ ಭಾಗದ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಉತ್ತಮ ಗುಣಮಟ್ಟದ ಹಾಗೂ ನಿರಂತರ ವಿದ್ಯುತ್ ಒದಗಿಸುವ ಸಲುವಾಗಿ ಹುದಿಕೇರಿಯಲ್ಲಿ ನೂತನ ವಿದ್ಯುತ್ ಪ್ರಸರಣ ಉಪ-ಕೇಂದ್ರ ಸ್ಥಾಪಿಸಲು ಭೂಮಿಪೂಜೆ ನೆರವೇರಿಸಿರುವೆ’ ಎಂದರು.

ಅತಿ ಶೀಘ್ರದಲ್ಲೇ ಇದನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಈ ವೇಳೆ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ವಲಯ ಕಾಂಗ್ರೆಸ್ ಅಧ್ಯಕ್ಷ ಸೂರಜ್, ಪೊನ್ನಂಪೇಟೆ ತಾಲ್ಲೂಕು ಅಕ್ರಮ ಸಕ್ರಮ ಸಮಿತಿಯ ಅಧ್ಯಕ್ಷ ಅಣಲಮಾಡ ಲಾಲಾ ಅಪ್ಪಣ್ಣ, ಹುದಿಕೇರಿ ಪಂಚಾಯಿತಿ ಅಧ್ಯಕ್ಷ ಕುಪ್ಪಣ ಮಾಡ ನವ್ಯ ಕಾವೇರಮ್ಮ, ಹಿರಿಯ ಕಾಂಗ್ರೆಸ್ ಮುಖಂಡರಾದ ಚೇಕ್ಕೇರ ವಾಸು ಕುಟ್ಟಪ್ಪ, ಚೆಕ್ಕೇರ ಸುಧೀರ್, ಮೋಟಯ್ಯ, ಡಿಸಿಸಿ ಸದಸ್ಯರಾದ ಮುಕಟ್ಟೀರ ಸಂದೀಪ್, ಅಜ್ಜಿಕುಟ್ಟಿರ ಗಿರೀಶ್, ನೂರೇರ ಮನೋಹರ್, ಅಣಲಮಾಡ ಹರೀಶ್, ಅಲಿರಾ ರಶೀದ್, ಕುಪ್ಪಣ ಮಾಡ ಕಾವೇರಮ್ಮ, ಕೊಡoಗಡ ವಾಸು, ಕೊಡಂಗಡ ದಮಯಂತಿ ಹಾಗೂ ಸೆಸ್ಕ್ ಅಧಿಕಾರಿಗಳು ಭಾಗವಹಿಸಿದ್ದರು.

₹19.34 ಕೋಟಿ ವೆಚ್ಚದ ಯೋಜನೆ

ಈ ವೇಳೆ ಮಾತನಾಡಿದ ಚೀಫ್ ಎಲೆಕ್ಟ್ರಿಕ್ ಆಫೀಸರ್ ರೋಷನ್ ಅಪ್ಪಚ್ಚು ‘ಈ ಉಪ ಕೇಂದ್ರದಿಂದ 11 ಕೆ.ವಿಯ 12 ಮಾರ್ಗ ಪೊನ್ನಂಪೇಟೆಯಿಂದ ಹುದಿಕೇರಿವರೆಗೆ ಹೊರ ಹೋಗಲಿದೆ. ಸುಮಾರು ₹ 19.34 ಕೋಟಿ ವೆಚ್ಚದ ಈ ಯೋಜನೆಯು ಒಂದು ವರ್ಷದ ಕಾಲಾವಧಿಯಲ್ಲಿ ಪೂರ್ಣಗೊಳ್ಳಲಿದೆ’ ಎಂದು ತಿಳಿಸಿದರು. ಶಾಸಕರ ಪ್ರಯತ್ನದಿಂದಾಗಿ ಕ್ಷೇತ್ರದಾದ್ಯಂತ ಹಲವು ವಿದ್ಯುತ್ ಉಪ-ಕೇಂದ್ರಗಳು ಸ್ಥಾಪನೆಗೊಳ್ಳುತ್ತಿದೆ. ಇಂತಹ ಕ್ರಮಗಳಿಂದ ಈ ಭಾಗದ ವಿದ್ಯುತ್ ಸಮಸ್ಯೆಗೆ ಮುಕ್ತಿ ದೊರೆಯಲಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.