ಶನಿವಾರ, ಫೆಬ್ರವರಿ 4, 2023
28 °C

ಮಡಿಕೇರಿಯಲ್ಲಿ ಪ್ರಜಾವಾಣಿ ಅಮೃತ ಮಹೋತ್ಸವ ಕಾರ್ಯಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: ಪ್ರಜಾವಾಣಿ ಅಮೃತ ಮಹೋತ್ಸವದ ಪ್ರಯುಕ್ತ ಪ್ರಜಾವಾಣಿ, ಕೊಡವ ಮಕ್ಕಡ ಕೂಟ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಕನ್ನಡ ಹಾಗೂ ಪತ್ರಿಕೋದ್ಯಮ ವಿಭಾಗಗಳು ಮಂಗಳವಾರ ಕಾಲೇಜಿನ ಸಭಾಂಗಣದಲ್ಲಿ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಹಾಗೂ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಿರಿಯ ಸಾಹಿತಿ ಬಾಚರಣಿಯಂಡ ಅಪ್ಪಣ್ಣ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು, ಕನ್ನಡ ಸಾಹಿತ್ಯಕ್ಕೆ ಕೊಡವರ ಕೊಡುಗೆ ಅಪಾರವಾಗಿದೆ. ಈ ಕುರಿತು ಇದೇ ಮೊದಲ ಬಾರಿಗೆ ಉಪನ್ಯಾಸ ಏರ್ಪಡಿಸುವ ಮೂಲಕ ಪ್ರಜಾವಾಣಿ ಅತ್ಯಂತ ಒಳ್ಳೆಯ ಕೆಲಸ ಮಾಡಿದೆ ಎಂದು ಶ್ಲಾಘಿಸಿದರು.

ಕೊಡಗಿನಲ್ಲಿನ ಕವಿಗಳ ಬಗ್ಗೆ ಸವಿಸ್ತಾರವಾಗಿ ಅವರು ಮಾತನಾಡಿದರು.

ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ ಕೊಡಗಿಗೆ ಪ್ರಜಾವಾಣಿ ನೀಡಿದ‌ ಕೊಡುಗೆ ಕುರಿತು ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲ ಚೌರೀರ ಜಗತ್ ತಿಮ್ಮಯ್ಯ ಅಧ್ಯಕ್ಷತೆ ವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು