‘ಕಕ್ಕಡ- 18 ತೀನಿ ನಮ್ಮೆ’
ಇಲ್ಲಿನ ಕೊಡವ ಸಮಾಜದ ಪೊಮ್ಮಕ್ಕಡ ಪರಿಷತ್ ವತಿಯಿಂದ ಭಾನುವಾರ ಕೊಡವ ಸಮಾಜದ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ಸಭಾಂಗಣದಲ್ಲಿ ಕಕ್ಕಡ- 18 ತೀನಿ ನಮ್ಮೆ ಸ್ಪರ್ಧೆ ಮತ್ತು ಪ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕೊಡವ ಸಮಾಜ ಮೊಮ್ಮಕ್ಕಡ ಪರಿಷತ್ ಅಧ್ಯಕ್ಷೆ ಬಾಳೆಯಡ ನಿಷಾ ಮೇದಪ್ಪ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕಣಿಲೆ, ಮರಕೆಸ, ಮದ್ದುಸೊಪ್ಪು ಸೇರಿದಂತೆ ವಿವಿಧ ತಿನಿಸುಗಳ ತಯಾರಿ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.