ತಲಕಾವೇರಿಯಲ್ಲಿ ತೀರ್ಥೋದ್ಭವ: ಸಿದ್ಧತೆಗೆ ಡಿ.ಸಿ ಸೂಚನೆ 

7
ತುಲಾ ಸಂಕ್ರಮಣ ಜಾತ್ರೆಯ ನಿಮತ್ತ ಪೂರ್ವಭಾವಿ ಸಭೆ 

ತಲಕಾವೇರಿಯಲ್ಲಿ ತೀರ್ಥೋದ್ಭವ: ಸಿದ್ಧತೆಗೆ ಡಿ.ಸಿ ಸೂಚನೆ 

Published:
Updated:
Deccan Herald

ಮಡಿಕೇರಿ: ತಲಕಾವೇರಿಯಲ್ಲಿ ಅ. 17ರಂದು ನಡೆಯುವ ತೀರ್ಥೋದ್ಭವಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಕಾವೇರಿ ತುಲಾ ಸಂಕ್ರಮಣ ಜಾತ್ರಾ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು. 

ಅಂದು ಸಂಜೆ 6.43ಕ್ಕೆ ತೀರ್ಥೋದ್ಭವ ಪುಣ್ಯಕಾಲ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಬಸ್‌ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಭಾಗಮಂಡಲದಿಂದ ತಲಕಾವೇರಿ ತನಕ ವಿದ್ಯುತ್‌ ವ್ಯವಸ್ಥೆ ಮಾಡಬೇಕು. ಸೆಸ್ಕ್‌ ಸಿಬ್ಬಂದಿ ನಿರಂತರವಾಗಿ ವಿದ್ಯುತ್‌ ವ್ಯವಸ್ಥೆ ಮಾಡಬೇಕು. ತಲಕಾವೇರಿ ಕುಂಡಿಕೆ ಹಾಗೂ ಕೊಳದ ಬಳಿ ನೂಕುನುಗ್ಗಲು ಆಗದಂತೆ ಬ್ಯಾರಿಕೇಡ್‌ ಅಳವಡಿಸಬೇಕು. ಗಣ್ಯರು, ಅತಿಥಿಗಳಿಗೆ ಅಗತ್ಯ ವ್ಯವಸ್ಥೆ ಮಾಡಿ ಯಾವುದೇ ತೊಂದರೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಅಗ್ನಿಶಾಮಕ ದಳ ಹಾಗೂ ಗೃಹರಕ್ಷಕ ದಳದ ಸಿಬ್ಬಂದಿಯನ್ನು ಸ್ಥಳದಲ್ಲಿ ಕರ್ತವ್ಯಕ್ಕೆ ನಿಯೋಜಿಸಬೇಕು ಎಂದು ಹೇಳಿದರು. 

ಭಾಗಮಂಡಲ ಮತ್ತು ತಲಕಾವೇರಿಯಲ್ಲಿ ತುರ್ತು ಚಿಕಿತ್ಸಾ ಘಟಕಗಳನ್ನು ತೆರೆಯಬೇಕು. ಆಂಬ್ಯುಲೆನ್ಸ್ ಸ್ಥಳದಲ್ಲಿ ಇರಬೇಕು ಎಂದು ಹೇಳಿದರು.

ತಲಕಾವೇರಿ, ಭಾಗಮಂಡಲಕ್ಕೆ ಆಗಮಿಸುವ ಭಕ್ತರಿಗೆ ಕುಡಿಯುವ ನೀರು, ತಾತ್ಕಾಲಿಕ ಶೌಚಾಲಯದ ವ್ಯವಸ್ಥೆ ಮಾಡಬೇಕು. ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಪ್ರಶಾಂತ್‌ಕುಮಾರ್‌ ಮಿಶ್ರ ಸೂಚಿಸಿದರು.

ಭಾಗಮಂಡಲ- ಭಗಂಡೇಶ್ವರ- ತಲಕಾವೇರಿ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಎಸ್. ತಮ್ಮಯ್ಯ, ಅರ್ಚಕರು ಮತ್ತು ತಕ್ಕ ಮುಖ್ಯಸ್ಥರು ಕುಂಡಿಕೆ ಬಳಿ ಇರುತ್ತಾರೆ. ಉಳಿದಂತೆ ಗಣ್ಯರು, ಪತ್ರಕರ್ತರು ಒಂದು ಕಡೆ ಇರುತ್ತಾರೆ. ಸ್ಥಳೀಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಸಾಧ್ಯತೆ ಇದ್ದು, ತುಲಾ ಸಂಕ್ರಮಣ ಒಂದು ತಿಂಗಳವರೆಗೆ ಅಗತ್ಯ ಬಸ್ ವ್ಯವಸ್ಥೆ ಕಲ್ಪಿಸುವಂತೆ ಅವರು ಕೋರಿದರು.

ಸಣ್ಣುವಂಡ ಕಾವೇರಪ್ಪ ಅವರು ಮಾತನಾಡಿ, ‘ತುಲಾ ಸಂಕ್ರಮಣ ಜಾತ್ರೆ ನಂತರ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸ್ವಚ್ಛತಾ ಆಂದೋಲನ ಆಯೋಜಿಸಬೇಕು’ ಎಂದು ಕೋರಿದರು.

ಡಿವೈಎಸ್‌ಪಿ ಸುಂದರ್‌ರಾಜ್‌, ತಕ್ಕ ಮುಖ್ಯಸ್ಥ ಕೋಡಿ ಮೋಟಯ್ಯ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಇಬ್ರಾಹಿಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ರವಿಕುಮಾರ್, ಸೆಸ್ಕ್ ಎಇಇ ದೇವಯ್ಯ ಹಾಜರಿದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !