ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ 3ನೇ ಅಲೆ ಎದುರಿಸಲು ಸಿದ್ಧತೆ

ಕುಶಾಲನಗರ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೋವಿಡ್ ಟಾಸ್ಕ್ ಫೋರ್ಸ್‌ ಸಭೆ
Last Updated 4 ಜೂನ್ 2021, 2:27 IST
ಅಕ್ಷರ ಗಾತ್ರ

ಕುಶಾಲನಗರ: ‘ಕೊರೊನಾ ಸೋಂಕು ತಡೆಗಟ್ಟಲು ಪಟ್ಟಣ ಪಂಚಾಯಿತಿ ಪಾತ್ರ ಮಹತ್ವವಾಗಿದ್ದು, ಪಟ್ಟಣವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದರ ಜೊತೆಗೆ ಜನಪ್ರತಿನಿಧಿಗಳು ಸೇವಾ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಹೇಳಿದರು.

ಇಲ್ಲಿನ ಪಟ್ಟಣ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕೋವಿಡ್ –19 ಟಾಸ್ಕ್ ಫೋರ್ಸ್‌ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

‘ಕೋವಿಡ್‌ ಮೂರನೇ ಸಂಭಾವ್ಯ ಅಲೆ ಜಿಲ್ಲೆಗೆ ಪ್ರವೇಶಿದಂತೆ ಸಕಲ ರೀತಿಯ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಸಲಹೆ ನೀಡಿದರು.

‘ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಆತಂಕ ಉಂಟು ಮಾಡಿದೆ. ಸೋಂಕಿನ ಪ್ರಮಾಣ, ತೀವ್ರತೆ ಹಾಗೂ ಸಾವಿನ ಸಂಖ್ಯೆ ಹೆಚ್ಚಾಗಿರುವುದು ವಿಷಾದಕರ ಸಂಗತಿ’ ಎಂದರು.

‘ಮೂರನೇ ಅಲೆ ಬಗ್ಗೆ ತಜ್ಞರು ಈಗಾಗಲೇ ಎಚ್ಚರಿಕೆ ನೀಡಿದ್ದು, ಇದರ ವಿರುದ್ಧ ಹೋರಾಡಲು ಪ್ರತಿಯೊಬ್ಬರೂ ಅಗತ್ಯ ಮುಂಜಾಗ್ರತೆ, ಸುರಕ್ಷತಾ ಕ್ರಮಗಳನ್ನು ಅನುರಿಸಬೇಕು’ ಎಂದು ಹೇಳಿದರು.

‘ಸಾರ್ವಜನಿಕರು ಕೋವಿಡ್ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಿದರೆ ಕೊರೊನಾ ಸೋಂಕು ಹರಡುವುದನ್ನು ತಪ್ಪಿಸಲು ಸಾಧ್ಯ, ಇದಕ್ಕೆ ಜನರು ಕೈಜೋಡಿಸಬೇಕು. ಸರ್ಕಾರವೂ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಕೊರೊನಾ ಸೋಂಕಿತರ ಸಮಸ್ಯೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿ ಸಹಕಾರ ನೀಡುವಲ್ಲಿ ಆಯಾ ಪಂಚಾಯಿತಿಗಳು ಮುಂದಾಗಿವೆ. ನಾನೂ ಖುದ್ದು ಕೋವಿಡ್ ಕೇಂದ್ರಗಳಿಗೆ ಭೇಟಿ ನೀಡಿ ನೇರವಾಗಿ ಸೋಂಕಿತರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಒದಗಿಸಿದ್ದೇನೆ’ ಎಂದು ತಿಳಿಸಿದರು.

ಇದೇ ಸಂದರ್ಭ ಪಂಚಾಯಿತಿ ಜನಪ್ರತಿನಿಧಿಗಳು, ವಿವಿಧ ಇಲಾಖೆ ಅಧಿಕಾರಿಗಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆ ಯರೊಂದಿಗೆ ಸಮಾಲೋಚನೆ ನಡೆಸಿದ ಶಾಸಕರು, ಅಗತ್ಯ ಮಾಹಿತಿ ಪಡೆದು ಸಲಹೆ ಸೂಚನೆ ನೀಡಿದರು.

ಪಟ್ಟಣ ಪಂಚಾಯಿತಿ ಅಧ್ಯಕ್ಷ ಬಿ.ಜೈವರ್ಧನ್ ಅಧ್ಯಕ್ಷತೆ ವಹಿಸಿದ್ದರು.

ಪ.ಪಂ.ಉಪಾಧ್ಯಕ್ಷೆ ಸುರೇಯಾ ಬಾನು, ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ್, ತಹಶೀಲ್ದಾರ್‌ ಗೋವಿಂದರಾಜು, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಜಯಣ್ಣ, ಡಿವೈಎಸ್ಪಿ ಶೈಲೇಂದ್ರಕುಮಾರ್, ತಾಲ್ಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಶ್ರೀನಿವಾಸ್, ಸರ್ಕಲ್‌ ಇನ್‌ಸ್ಪೆಕ್ಟರ್‌ ಮಹೇಶ್, ಪ.ಪಂ.ಸದಸ್ಯರು, ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ಸೇರಿದಂತೆ ಕಂದಾಯ, ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT