ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳ ವಿಜ್ಞಾನ ಸಮಾವೇಶಕ್ಕೆ ಸಿದ್ಧತೆ

ಮಾರ್ಗದರ್ಶಿ ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ ನಾಳೆ
Last Updated 16 ನವೆಂಬರ್ 2022, 11:01 IST
ಅಕ್ಷರ ಗಾತ್ರ

ಮಡಿಕೇರಿ: ಡಿಸೆಂಬರ್ ಮೊದಲ ವಾರದಲ್ಲಿ ಜಿಲ್ಲಾಮಟ್ಟದ ಮಕ್ಕಳ ವಿಜ್ಞಾನ ಸಮಾವೇಶ ನಡೆಯಲಿದ್ದು, ಸಿದ್ಧತೆಗಳು ಆರಂಭವಾಗಿವೆ.

ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಮಂಡಳಿ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ನಡೆಯಲಿರುವ 30ನೇ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾ ವೇಶಕ್ಕೆ ಪೂರ್ವಭಾವಿಯಾಗಿ ಜಿಲ್ಲಾಮಟ್ಟ ದಲ್ಲೂ ಸಮಾವೇಶ ನಡೆಯಲಿದೆ.

ಈ ಬಾರಿ ‘ಯೋಗಕ್ಷೇಮಕ್ಕಾಗಿ ಜೀವಿ ಪರಿಸರ ವ್ಯವಸ್ಥೆಯನ್ನು ಅರ್ಥ ಮಾಡಿಕೊಳ್ಳೋಣ’ ಎಂಬ ವಿಷಯವನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಇದಕ್ಕೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಸಲುವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ, ಮಡಿಕೇರಿ ನಗರದ ರೋಟರಿ ಮಿಸ್ಟಿ ಹಿಲ್ಸ್ ಸಹಯೋಗದೊಂದಿಗೆ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಜ್ಞಾನ ಶಿಕ್ಷಕರು ಹಾಗೂ ಆಸಕ್ತ ಶಿಕ್ಷಕರಿಗೆ ನ. 17ರಂದು ಬೆಳಿಗ್ಗೆ 9.45ಕ್ಕೆ ಮಡಿಕೇರಿ ನಗರದ ರೋಟರಿ ಮಕ್ಕಳ ವಿಜ್ಞಾನ ಕೇಂದ್ರದಲ್ಲಿಜಿಲ್ಲಾಮಟ್ಟದ ತರಬೇತಿ ಕಾರ್ಯಾಗಾರ ಏರ್ಪಡಿಸಿದೆ.

ಈ ತರಬೇತಿ ಕಾರ್ಯಾಗಾರದಲ್ಲಿ ಸಮಾವೇಶದ ಕೇಂದ್ರ ವಿಷಯದಡಿ ವಿವಿಧ ಉಪ ವಿಷಯದಡಿ ಮಕ್ಕಳಿಂದ ವೈಜ್ಞಾನಿಕ ಯೋಜನಾ ಪ್ರಬಂಧ ತಯಾರಿಸುವ ಕುರಿತು ತರಬೇತಿ ನೀಡಲಾಗುವುದು ಎಂದು ಡಿಡಿಪಿಐ ವೇದಮೂರ್ತಿ ತಿಳಿಸಿದ್ದಾರೆ.

ಡಿಸೆಂಬರ್ ಮೊದಲ ವಾರದಲ್ಲಿ ಜಿಲ್ಲಾಮಟ್ಟದ ಮಕ್ಕಳ ವಿಜ್ಞಾನ ಸಮಾ ವೇಶ ನಡೆಯಲಿದ್ದು, ಜಿಲ್ಲಾಮಟ್ಟದ ಸಮಾವೇಶದಲ್ಲಿ ಉತ್ತಮವಾಗಿ
ಪ್ರಬಂಧ ಮಂಡಿಸುವ 10 ಮಂದಿ ಬಾಲವಿಜ್ಞಾನಿ ಗಳು ಡಿಸೆಂಬರ್ ಎರಡನೇ ವಾರದಲ್ಲಿ ನಡೆಯಲಿರುವ ರಾಜ್ಯಮಟ್ಟದ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಭಾಗವ ಹಿಸಿ ಪ್ರಬಂಧ ಮಂಡಿಸಲಿದ್ದಾರೆ. ರಾಜ್ಯಮಟ್ಟ ದಲ್ಲಿ ಆಯ್ಕೆಯಾಗುವ ಮೊದಲ 30 ತಂಡಗಳು ಡಿ.27 ರಿಂದ 31 ರವರೆಗೆ 5 ದಿನಗಳ ಕಾಲ ಗುಜರಾತ್‍ನ ಅಹಮದಾಬಾದ್ ನಗರದಲ್ಲಿ ನಡೆಯಲಿ ರುವ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶ-2022 ದಲ್ಲಿ ಭಾಗವಹಿಸಲು ಅರ್ಹತೆ ಪಡೆಯಲಿದ್ದಾರೆ ಎಂದು ಸಮಾವೇಶದ ಜಿಲ್ಲಾ ಸಂಯೋಜಕ ಜಿ.ಶ್ರೀಹರ್ಷ ಹೇಳಿದ್ದಾರೆ.

ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶವನ್ನು 10-17 ವಯೋ ಮಾನದ ಮಕ್ಕಳಿಗಾಗಿ ಪಠ್ಯಕ್ರಮಕ್ಕೆ ಪೂರಕವಾದ ವಿಜ್ಞಾನ ಚಟು ವಟಿಕೆಗಳಿಂದ ಕೂಡಿದ ಕಾರ್ಯಕ್ರಮ ವಾಗಿದೆ. ಈ ಸಮಾವೇಶವು ಮಕ್ಕಳಲ್ಲಿ ವಿಜ್ಞಾನ ಆಸಕ್ತಿ, ಕುತೂಹಲ, ಕ್ರಿಯಾಶೀಲತೆ ಹಾಗೂ ಸೃಜನಶೀಲತೆ ಬೆಳೆಸುವುದರೊಂದಿಗೆ ಅವರಲ್ಲಿ ಸಂಶೋಧನಾ ಪ್ರವೃತಿ ಹಾಗೂ ಭವಿಷ್ಯದ ವಿಜ್ಞಾನಿಗಳನ್ನಾಗಿ ರೂಪಿಸಲು ಸೂಕ್ತ ವೇದಿಕೆ ಒದಗಿಸಲಿದೆ ಎಂದು ವಿಜ್ಞಾನ ಕಾರ್ಯಕ್ರಮದ ಸಂಘಟಕರೂ ಆದ ವಿಜ್ಞಾನ ಪರಿಷತ್ತಿನ ಜಿಲ್ಲಾ ಸಮಿತಿ ಅಧ್ಯಕ್ಷ ಟಿ.ಜಿ.ಪ್ರೇಮಕುಮಾರ್ ಮಾಹಿತಿ ನೀಡಿದರು.

2 ವಿದ್ಯಾರ್ಥಿಗಳನ್ನೊಳಗೊಂಡ ತಂಡದಲ್ಲಿ ಶಿಕ್ಷಕರ ಮಾರ್ಗದರ್ಶನ ದೊಂದಿಗೆ ಕೇಂದ್ರ ವಿಷಯದಡಿ ವಿವಿಧ ಉಪ ವಿಷಯಗಳಿಗೆ ಸಂಬಂಧಿಸಿದಂತೆ ತಮ್ಮ ಸುತ್ತಲಿನ ಪರಿಸರದಲ್ಲಿನ ಸಮಸ್ಯೆಯನ್ನು ಗುರುತಿಸಿ ಸಂಗ್ರಹಿತ ಮಾಹಿತಿಯನ್ನು ವಿಶ್ಲೇಷಿಸುತ್ತಾರೆ. ವಿದ್ಯಾರ್ಥಿಗಳು ಕೈಗೊಂಡ ಚಟುವಟಿಕೆ ಗಳು, ಮಾಹಿತಿ ಸಂಗ್ರಹಣೆ, ತಜ್ಞ ರೊಂದಿಗೆ ಸಮಾಲೋಚನೆ, ವಿಶ್ಲೇಷಣೆ, ಪರಿಹಾರೋಪಾಯಗಳ ಸಾರಾಂಶವನ್ನು ಸಮಗ್ರವಾಗಿ ಪ್ರಬಂಧ ರೂಪದಲ್ಲಿ ಸಿದ್ಧಪಡಿಸುತ್ತಾರೆ. ಈ ಪ್ರಕ್ರಿಯೆಯಲ್ಲಿ ಮಕ್ಕಳಲ್ಲಿ ಅಡಗಿದ ಸೃಜನಾತ್ಮಕಪ್ರತಿಭೆ, ವಿಶ್ಲೇಷಣಾ ಸಾಮಥ್ರ್ಯ ಓರೆಗೆ ಹಚ್ಚಲ್ಪಟ್ಟ ಅತ್ಯುತ್ತಮ ಮಟ್ಟದಲ್ಲಿ ಹೊರಹೊಮ್ಮಲು ಅವಕಾಶ ಸಿಗುತ್ತದೆ ಎಂದು ತಿಳಿಸಿದ್ದಾರೆ.


ಸಮಾವೇಶದ ಕುರಿತು ಮಾಹಿತಿಗೆ ಜಿಲ್ಲಾ ಸಂಯೋಜಕ ಜಿ.ಶ್ರೀಹರ್ಷ ಮೊ: 9481431263, ವಿಜ್ಞಾನ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಡಿ.ಕೃಷ್ಣಚೈತನ್ಯ ಮೊ:9449202055 ಅಥವಾ ಪರಿಷತ್ತಿನ ಜಿಲ್ಲಾ ಸಮಿತಿ ಅಧ್ಯಕ್ಷ ಟಿ.ಜಿ.ಪ್ರೇಮಕುಮಾರ್ ಮೊ.94485 88352 ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT