ಸೋಮವಾರ, ಜನವರಿ 27, 2020
26 °C

ಮಡಿಕೇರಿ: ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ನಾಗೇಶ್ ಕಾಲೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಡಿಕೇರಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕೊಡಗಿನ ಗಡಿ ನಿಡ್ತ ಗ್ರಾಮದಲ್ಲಿ ಹಮ್ಮಿಕೊಳ್ಳ
ಲಾಗಿರುವ 14ನೇ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಬಹುಭಾಷಾ ಸಾಹಿತಿ ನಾಗೇಶ್ ಕಾಲೂರು ಅವರು ಆಯ್ಕೆಯಾಗಿದ್ದಾರೆ.

ಕಸಾಪ ಜಿಲ್ಲಾಧ್ಯಕ್ಷ ಬಿ.ಎಸ್.ಲೋಕೇಶ್ ಸಾಗರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಸಮಿತಿ ಸಭೆಯಲ್ಲಿ ನಾಗೇಶ್ ಕಾಲೂರು ಅವರನ್ನು ಒಮ್ಮತದಿಂದ ಆಯ್ಕೆ ಮಾಡಲಾಗಿದೆ. ಸಾಹಿತ್ಯ ಸಮ್ಮೇಳನ ಜ.31 ಹಾಗೂ ಫೆ.1ರಂದು ನಿಡ್ತ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಲಿದೆ.

ಗೌರವ ಕಾರ್ಯದರ್ಶಿ ಕೆ.ಎಸ್.ರಮೇಶ್, ಮಡಿಕೇರಿ ತಾಲ್ಲೂಕು ಅಧ್ಯಕ್ಷ ಕುಡೆಕಲ್ ಸಂತೋಷ್, ವಿರಾಜಪೇಟೆ ಅಧ್ಯಕ್ಷ ಮಧೋಶ್ ಪೂವಯ್ಯ, ನಿರ್ದೇಶಕರಾದ ಕೋಡಿ ಚಂದ್ರಶೇಖರ್, ಲೋಕನಾಥ್ ಅಮೆಚೂರ್, ಎಸ್.ಪಿ.ಪ್ರಸನ್ನ ಹಾಜರಿದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು