₹ 400 ಕೋಟಿ ವಿಶೇಷ ಪ್ಯಾಕೇಜ್‌ ಘೋಷಣೆಗೆ ಆಗ್ರಹ

7

₹ 400 ಕೋಟಿ ವಿಶೇಷ ಪ್ಯಾಕೇಜ್‌ ಘೋಷಣೆಗೆ ಆಗ್ರಹ

Published:
Updated:
ಎಚ್‌.ಡಿ. ಕುಮಾರಸ್ವಾಮಿ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಇದೇ 19 ಹಾಗೂ 20ರಂದು ಪ್ರವಾಸ ಹಮ್ಮಿಕೊಂಡಿದ್ದು ರಸ್ತೆಗಳ ಅಭಿವೃದ್ಧಿಗೆ ಕನಿಷ್ಠ ₹ 400 ಕೋಟಿ ವಿಶೇಷ ಪ್ಯಾಕೇಜ್ ಘೋಷಿಸಿಸಬೇಕು ಎಂದು ಅಹಿಂದ ಒಕ್ಕೂಟದ ಅಧ್ಯಕ್ಷ ಟಿ.ಎಂ. ಮುದ್ದಯ್ಯ ಆಗ್ರಹಿಸಿದರು.

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಜಿಲ್ಲೆಯ ವಿವಿಧ ಬೇಡಿಕೆಗಳನ್ನೂ ಅವರು ಈಡೇರಿಸಬೇಕು. ಒಕ್ಕೂಟದಿಂದ ಕುಮಾರಸ್ವಾಮಿ ಅವರಿಗೆ ಮನವಿಯನ್ನೂ ಸಲ್ಲಿಸಲಾಗುವುದು’ ಎಂದು ಹೇಳಿದರು. 

‘ಜೂನ್ ತಿಂಗಳ ಆರಂಭದಿಂದಲೇ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯ ರಭಸಕ್ಕೆ ಜಿಲ್ಲೆಯ ಎಲ್ಲಾ ರಸ್ತೆಗಳು ಹಾಳಾಗಿದೆ. ಸರಿಪಡಿಸಲು ಸುಮಾರು ₹ 400 ಕೋಟಿ ಅವಶ್ಯಕತೆಯಿದೆ. ಇನ್ನು ಮಳೆ ಹೆಚ್ಚಾದ ಪರಿಣಾಮ ಕಾಫಿ, ಮೆಣಸು ಸೇರಿದಂತೆ ಇನ್ನಿತರ ಬೆಳೆಗಳು ಕೊಳೆರೋಗಕ್ಕೆ ತುತ್ತಾಗುವ ಸಾಧ್ಯತೆ ಇದೆ. ಆದ್ದರಿಂದ, ಬೆಳೆಗಾರರಿಗೆ ಶೀಘ್ರವಾಗಿ ಸರ್ಕಾರ ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕು’ ಎಂದು ಮನವಿ ಮಾಡಿದರು.

‘ಹೊರದೇಶಗಳಿಂದ ಅಮದು ಮಾಡಿಕೊಳ್ಳುತ್ತಿರುವ ಕಾಳು ಮೆಣಸಿನಿಂದ ₹600 ಇದ್ದ ಜಿಲ್ಲೆಯ ಕಾಳುಮೆಣಸು ಇಂದು ₹250ಕ್ಕೆ ಇಳಿದಿದೆ. 2 ವರ್ಷಗಳಿಂದ ಬೆಲೆ ಏರಿಕೆಯ ನಿರೀಕ್ಷೆಯಲ್ಲಿ ದಾಸ್ತಾನು ಇಟ್ಟಿರುವ ರೈತರು ಕಡಿಮೆ ಬೆಲೆಗೆ ಮಾರುವ ಸ್ಥಿತಿಯಲ್ಲಿ ಇಲ್ಲ. ಇದರಿಂದ ತೋಟದ ಕೆಲಸಕ್ಕೆ ಕೈಯಲ್ಲಿ ಹಣ ಇಲ್ಲದೆ ಪರದಾಡುವಂತಾಗಿದೆ. ಈ ಕುರಿತು ಮುಖ್ಯಮಂತ್ರಿಗಳ ಗಮನ ಸೆಳೆಯಲಾಗುವುದು’ ಎಂದು ಹೇಳಿದರು.

ಒಕ್ಕೂಟದ ಗೌರವಾಧ್ಯಕ್ಷ ಶಂಷುದ್ದೀನ್‌ ಮಾತನಾಡಿ, ‘ಮಳೆಗೆ ಜಿಲ್ಲೆಯಲ್ಲಿ ರಸ್ತೆಗಳು ಸಂಪೂರ್ಣ ಹಾಳಾಗಿವೆ. ಜಿಲ್ಲಾಡಳಿತ ಹಾಗೂ ರಾಜ್ಯ ಸರ್ಕಾರಗಳು ಹೊಸ ರಸ್ತೆಗಳ ನಿರ್ಮಾಣ ಮಾಡಬೇಕು. ನೆರೆ ಬಂದ ಹಿನ್ನೆಲೆ ಗ್ರಾಮೀಣ ಪ್ರದೇಶದಲ್ಲಿ ಸಾಕಷ್ಟು ಸೇತುವೆಗಳು ಕೊಚ್ಚಿಹೋಗುವ ಹಂತಕ್ಕೆ ತಲುಪಿವೆ. ಅದನ್ನು ಗುರುತಿಸಿ ಸರಿಪಡಿಸುವ ಕಾರ್ಯವಾಗಬೇಕು. ಆನೆ- ಮಾನವ ಸಂಘರ್ಷಕ್ಕೆ ಸಂಬಂಧಿಸಿದಂತೆ ಅರಣ್ಯ ಪ್ರದೇಶದಲ್ಲಿ ತೇಗ ಮರಗಳ ಬದಲು ಹಲಸು, ಬಿದಿರುಗಳನ್ನು ನೆಡುವಂತಹ ಕೆಲಸವಾಗಬೇಕು’ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟದ ಕಾರ್ಯದರ್ಶಿ ಅಬ್ದುಲ್ ಹಾಜರಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !