ಸೋಮವಾರ, 14 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿಪತ್ತು ನಿರ್ವಹಣೆಯ ಕುರಿತು ಕಾರ್ಯಕ್ರಮ

Published : 20 ಸೆಪ್ಟೆಂಬರ್ 2024, 9:03 IST
Last Updated : 20 ಸೆಪ್ಟೆಂಬರ್ 2024, 9:03 IST
ಫಾಲೋ ಮಾಡಿ
Comments

ಮಡಿಕೇರಿ: ಪೊನ್ನಂಪೇಟೆ ತಾಲ್ಲೂಕಿನ ಕೂರ್ಗ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಎನ್.ಡಿ.ಆರ್.ಎಫ್. ತಂಡದ ಸಹಯೋಗದೊಂದಿಗೆ ವಿಪತ್ತು ನಿರ್ವಹಣೆಯ ಕುರಿತು ಕಾರ್ಯಕ್ರಮವನ್ನು‌ ಆಯೋಜಿಸಲಾಗಿತ್ತು.

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತ ಆರ್.ಎಂ.ಅನನ್ಯ ವಾಸುದೇವ್ ಅವರು ಕೊಡಗು ಜಿಲ್ಲೆಯಲ್ಲಿ ಉಂಟಾಗುವ‌ ವಿಪತ್ತುಗಳು ಹಾಗೂ ಅದರ ವ್ಯವಸ್ಥಿತ ನಿರ್ವಹಣೆ ಕುರಿತು ಮಾಹಿತಿ‌‌ ನೀಡಿದರು.

ಎನ್.ಡಿ.ಆರ್.ಎಫ್. ತಂಡದ ಮುಖ್ಯಸ್ಥರಾದ ರಾಮ್ ಭಜ್ ಹಾಗೂ ಸಿಬ್ಬಂದಿ ಜೀವ ಉಳಿಸುವ ಸಾಧನಗಳು ಹಾಗೂ ಅವುಗಳ ಬಳಕೆಯ ಬಗ್ಗೆ ಪ್ರಾತ್ಯಕ್ಷಿಕೆ ತೋರಿಸಿದರು.

ಪ್ರಾಂಶುಪಾಲರಾದ ಬಸವರಾಜ, ಕಾಲೇಜಿನ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ನಂತರ‌ ಸಸಿ ನೆಡುವ ಕಾರ್ಯಕ್ರಮದಲ್ಲಿ‌ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT