ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅರೆಭಾಷೆ ಸಂಸ್ಕೃತಿ ಉಳಿಸಿ’

Last Updated 15 ಏಪ್ರಿಲ್ 2021, 13:34 IST
ಅಕ್ಷರ ಗಾತ್ರ

ಸೋಮವಾರಪೇಟೆ: ‘ಮಾತೃಭಾಷೆಯಾದ ಅರೆಭಾಷೆ ಮತ್ತು ಸಂಸ್ಕೃತಿ ಹೊರ ಜಗತ್ತಿಗೆ ತಿಳಿಯುವ ಕೆಲಸ ಆಗಬೇಕು’ ಎಂದು ಕರ್ನಾಟಕ ಅರೆಭಾಷೆ, ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ಹೇಳಿದರು.

ಸಮೀಪದ ಐಗೂರು-ಯಡವಾರೆ ಗ್ರಾಮದ ಅರೆಭಾಷೆ ಗೌಡ ಸಮಾಜದ ಸಭಾಂಗಣದಲ್ಲಿ ಗುರುವಾರ ನಡೆದ ಅರೆಭಾಷೆ ಸಂಸ್ಕೃತಿ ಶಿಬಿರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಭಾಷೆ ಬೆಳವಣಿಗೆ ದೃಷ್ಟಿಯಿಂದ ಕರ್ನಾಟಕ ಅರೆಭಾಷೆ, ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮೂರು ದಿನಗಳ ಶಿಬಿರ ಆಯೋಜಿಸಿದೆ. ಈ ಶಿಬಿರದ ಆಶಯವನ್ನು ಸದುಪಯೋಗಪಡಿಸಿಳ್ಳಬೇಕು. ಪ್ರತಿಯೊಬ್ಬರಿಗೂ ವೇದಿಕೆ ಸಿಕ್ಕರೆ ಮುಂದೆ ಬರಲು ಸಾಧ್ಯ’ ಎಂದು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕಿ ಮಿಲನಾ ಭರತ್ ಮಾತನಾಡಿ, ‘ಇತಿಹಾಸವನ್ನು ಮರೆತವರು ಇತಿಹಾಸ ಸೃಷ್ಟಿಸಲು ಆಗುವುದಿಲ್ಲ. ಹಾಗೇ ನಮ್ಮತನ ಮತ್ತು ಭಾಷೆಯ ಮೇಲೆ ಅಭಿಮಾನ ಇರಬೇಕು. ಯುವಜನರಿಗೆ ಸಂಸ್ಕೃತಿಯ ಪರಿಚಯ ಮಾಡಿಕೊಡುವುದರೊಂದಿಗೆ ಸಂಸ್ಕೃತಿ ಉಳಿಸಲು ಪ್ರತಿಯೊಬ್ಬರೂ ಮುಂದಾಗಬೇಕು’ ಎಂದು ತಿಳಿಸಿದರು.

ಸಮಾಜದ ಅಧ್ಯಕ್ಷ ಕಡ್ಲೇರ ಹೊನ್ನಪ್ಪ ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಅಕಾಡೆಮಿ ಸದಸ್ಯರಾದ ಬೈತಡ್ಕ ಜಾನಕಿ ಬೆಳ್ಳಿಯಪ್ಪ, ಚೊಕ್ಕಾಡಿ ಪ್ರೇಮ ರಾಘವಯ್ಯ, ಎ.ಟಿ. ಕುಸುಮಾಧರ, ಪುರುಷೋತ್ತಮ ಕಿರುಲಾಯ, ಸಮಾಜದ ಗೌರವಾಧ್ಯಕ್ಷ ಪೊನ್ನಚ್ಛನ ಗಣಪತಿ, ಪ್ರಮುಖರಾದ ಮೂಲೆ ಮಜಲು ಕವನ ಮನೋಜ್, ನಂಗಾರು ಕೀರ್ತಿಪ್ರಸಾದ್ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಕಡ್ಯದ ಪಾರ್ವತಿ ಕೃಷ್ಣಪ್ಪ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT