ಅಂತರರಾಷ್ಟ್ರೀಯ ವಿಪತ್ತು ಘೋಷಣೆಗೆ ಆಗ್ರಹ

7
ಸತ್ಯಾಗ್ರಹ ಅಂತ್ಯ, ಕೊಡಗು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಕೆ

ಅಂತರರಾಷ್ಟ್ರೀಯ ವಿಪತ್ತು ಘೋಷಣೆಗೆ ಆಗ್ರಹ

Published:
Updated:
Deccan Herald

ಮಡಿಕೇರಿ: ಕೊಡಗು ಜಿಲ್ಲೆಗೆ ಬಂದಿರುವ ನೆರವು ಕುರಿತು ಶ್ವೇತಪತ್ರ ಹೊರಡಿಸುವುದೂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ, ನಗರದ ಗಾಂಧಿ ಮೈದಾನದಲ್ಲಿ ಕೊಡವ ನ್ಯಾಷನಲ್‌ ಕೌನ್ಸಿಲ್‌ ಸದಸ್ಯರು 24 ಗಂಟೆಗಳ ಕಾಲ ನಡೆಸಿದ ಸತ್ಯಾಗ್ರಹವನ್ನು ಗುರುವಾರ ಬೆಳಿಗ್ಗೆ ಅಂತ್ಯಗೊಳಿಸಿದರು. 

ಪ್ರತಿಭಟನಾ ಸ್ಥಳಕ್ಕೆ ಬಂದ ವಿಶೇಷ ಜಿಲ್ಲಾಧಿಕಾರಿ ಜಗದೀಶ್‌ ಅವರಿಗೆ ಮನವಿ ಪತ್ರ ಸಲ್ಲಿಸಿ, ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು.

ದಾನಿಗಳಿಂದ ಹರಿದುಬಂದ ಆರ್ಥಿಕ ನೆರವು, ಆಹಾರ ಪದಾರ್ಥ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಗೆ ಬಂದಿರುವ ಹಣದ ಮಾಹಿತಿ ಬಹಿರಂಗ ಪಡಿಸಬೇಕು. ಜಿಲ್ಲೆಯ ಮರು ನಿರ್ಮಾಣಕ್ಕೆ ಬಂದ ನೆರವನ್ನು ಬೇರೆ ಪ್ರದೇಶ, ಬೇರೆ ಉದ್ದೇಶಕ್ಕೆ ಬಳಸಬಾರದು. ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಬಳಸುತ್ತೇವೆಂದು ಸರ್ಕಾರ ಭರವಸೆ ನೀಡಬೇಕು ಎಂದು ಒತ್ತಾಯಿಸಿದರು.

ಜಲ ಸ್ಫೋಟ, ಭೂಸ್ಫೋಟದಿಂದ ಬೀದಿಪಾಲಾದ ಸಂತ್ರಸ್ತರ ಬದುಕು ಇಂದಿಗೂ ಅತಂತ್ರವಾಗಿದೆ. ಪುನರ್ವಸತಿಯ ಸ್ಪಷ್ಟ ಚಿತ್ರಣ ಲಭ್ಯವಾಗಿಲ್ಲ. ಆದಷ್ಟು ಬೇಗ ಪುನರ್ವಸತಿ ಕಲ್ಪಿಸಬೇಕು ಎಂದು ಕೋರಿದರು.

ಕೌನ್ಸಿಲ್‌ ಅಧ್ಯಕ್ಷ ಎನ್‌.ಯು. ನಾಚಪ್ಪ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !