ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಂಡೂರಾವ್ ಬಡಾವಣೆಯಲ್ಲಿ ಸಂಚಾರ ಪೊಲೀಸ್ ಠಾಣೆ ಸ್ಥಾಪನೆ ವಿರೋಧಿಸಿ ಪ್ರತಿಭಟನೆ

Last Updated 11 ಮಾರ್ಚ್ 2020, 19:45 IST
ಅಕ್ಷರ ಗಾತ್ರ

ಕುಶಾಲನಗರ: ಪಟ್ಟಣದ ಗುಂಡೂರಾವ್ ಬಡಾಣೆಯಲ್ಲಿ ಸಂಚಾರಿ ಪೊಲೀಸ್ ಠಾಣೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ಬಡಾವಣೆ ನಿವಾಸಿಗಳು ಪಟ್ಟಣ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಗುಂಡೂರಾವ್ ಬಡಾವಣೆ ವ್ಯಾಪ್ತಿಯಲ್ಲಿ ಸಾರ್ವಜನಿಕ ಬಳಕೆಗೆ ಮೀಸಲಿರಿಸಿದ 27 ಸೆಂಟ್ ಪ್ರದೇಶದಲ್ಲಿ ಸಂಚಾರ ಪೊಲೀಸ್ ಠಾಣೆ ನಿರ್ಮಾಣಕ್ಕೆ ಜಿಲ್ಲಾಡಳಿತ ಅನುಮತಿ ಕಲ್ಪಿಸಿರುವುದನ್ನು ಪ್ರತಿಭಟnAಕಾರರು ಖಂಡಿಸಿದರು. ಸಂಚಾರ ಪೊಲೀಸ್ ಠಾಣೆ ನಿರ್ಮಾಣದಿಂದ ಬಡಾವಣೆ ಸೇರಿದಂತೆ ಸುತ್ತಮುತ್ತಲ ಬಡಾವಣೆಗಳ ಜನತೆಗೆ ಶಾಂತಿಭಂಗ ಉಂಟಾಗಲಿದೆ ಎಂದು ಸಮಾಧಾನ ವ್ಯಕ್ತಪಡಿಸಿದರು.

ಪೊಲೀಸ್ ಠಾಣೆ ನಿರ್ಮಾಣಕ್ಕೆ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದರೂ ಜನರ ಭಾವನೆಗಳಿಗೆ ಬೆಲೆ ಕೊಡದೆ ಜಿಲ್ಲಾಧಿಕಾರಿಗಳು ಅನುಮತಿ ಕಲಿಸಿರುವುದನ್ನು ವಿರೋಧಿಸಿ ಘೋಷಣೆಗಳನ್ನು ಕೂಗಿದರು. ಈ ಕೂಡಲೇ ಜಿಲ್ಲಾಧಿಕಾರಿಗಳು ನೀಡಿರುವ ಮಂಜೂರಾತಿ ಆದೇಶವನ್ನು ರದ್ದುಗೊಳಿಸಬೇಕೆಂದು ಬಡಾವಣೆ ನಿವಾಸಿಗಳು ಒತ್ತಾಯಿಸಿದರು. ಈ ಸಂಬಂಧ ತಾಲ್ಲೂಕು ತಹಶೀಲ್ದಾರ್ ಗೋವಿಂದರಾಜು ಮತ್ತು ಕುಶಾಲನಗರ ಪ.ಪಂ ಮುಖ್ಯಾಧಿಕಾರಿ ಸುಜಯ್ ಕುಮಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಜಿ.ಪಂ.ಮಾಜಿ ಸದಸ್ಯ ವಿ.ಪಿ.ಶಶಿಧರ್ ಮಾತನಾಡಿ, ಜನನಿಬಿಡ ಪ್ರದೇಶದಲ್ಲಿ ಸಂಚಾರ ಪೊಲೀಸ್ ಠಾಣೆ ನಿರ್ಮಾಣಗೊಂಡಲ್ಲಿ ಈ ಭಾಗದ ನಿವಾಸಿಗಳ ಸ್ವಸ್ಥತೆ ಹಾಳಾಗುತ್ತದೆ. ಗುಂಡೂರಾವ್ ಬಡಾವಣೆ ಸೇರಿದಂತೆ ಸುತ್ತಮುತ್ತಲ ಬಡಾವಣೆಗಳ 1,300 ಕ್ಕೂ ಅಧಿಕ ನಿವೇಶನಗಳ 5 ಸಾವಿರ ಮಂದಿಗೆ ಅನಾನುಕೂಲ ಸೃಷ್ಟಿಯಾಗಲಿದೆ. ಈ ಭಾಗದ ಜನರ ಸಾಂಸ್ಕೃತಿಕ, ಧಾರ್ಮಿಕ, ಸಾಮಾಜಿಕ ಚಟುವಟಿಕೆಗಳಿಗೆ ಈ ಸ್ಥಳವನ್ನು ಮೀಸಲಿಡಬೇಕು ಎಂದು ಒತ್ತಾಯಿಸಿದರು.

ಪೆಟ್ರೋಲ್ ಬಂಕ್ ನಿರ್ಮಾಣಕ್ಕೆ ವಿರೋಧ: ಸಾಯಿ ಬಡಾವಣೆಯಲ್ಲಿ ಸಿಎ ಸೈಟ್ ನಲ್ಲಿ ಪೆಟ್ರೋಲ್ ಬಂಕ್ ನಿರ್ಮಾಣಕ್ಕೆ ಜಿ.ಪಂ ಸದಸ್ಯೆ ಕೆ.ಪಿ.ಚಂದ್ರಕಲಾ, ಮಾಜಿ ಶಶಿಧರ್, ಪ.ಪಂ ಮಾಜಿ ಸದಸ್ಯ ನಂಜುಂಡ ಸ್ವಾಮಿ ಮತ್ತಿತರರು ಆಕ್ಷೇಪ ವ್ಯಕ್ತಪಡಿಸಿದರು. ಮುಳುಗಡೆ ಪ್ರದೇಶವಾಗಿರುವ ಸಾಯಿ ಬಡಾವಣೆಯಲ್ಲಿ ಪೆಟ್ರೋಲ್ ಬಂಕ್ ನಿರ್ಮಾಣಕ್ಕೆ ಜಿಲ್ಲಾಧಿಕಾರಿಗಳು ಅನುಮತಿ ಕಲ್ಪಿಸಬಾರದು ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT