ಸೋಮವಾರಪೇಟೆ: ಕಳೆದ ಹಲವು ವರ್ಷಗಳಿಂದ ಕೃಷಿ ಜಮೀನುಗಳ ಪೋಡಿ ದುರಸ್ತಿಪಡಿಸಲು ರೈತರು ತಾಲ್ಲೂಕು ಕಚೇರಿಗೆ ಅರ್ಜಿ ಸಲ್ಲಿಸಿದ್ದರೂ, ಇದುವರೆಗೆ ಜಾಗದ ದುರಸ್ತಿ ಮಾಡಿಲ್ಲ ಎಂದು ಆರೋಪಿಸಿದ ರೈತರು ತಾಲ್ಲೂಕು ಕಚೇರಿ ಎದುರು ಸೋಮವಾರ ಅನಿರ್ದಿಷ್ಟಾವಧಿ ಧರಣಿ ಪ್ರಾರಂಭಿಸಿದರು.

ವಿಷದ ಬಾಟಲಿಯನ್ನು ಎದುರು ಇಟ್ಟುಕೊಂಡು ಪ್ರತಿಭಟನೆ ನಡೆಸಿದ ಅವರು, ಸಮಸ್ಯೆ ಇತ್ಯರ್ಥವಾಗದಿದ್ದಲ್ಲಿ ವಿಷ ಕುಡಿದು ಪ್ರಾಣ ಬಿಡುವುದಾಗಿಯೂ ಎಚ್ಚರಿಸಿದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳದಿಂದ ವಿಷದ ಬಾಟಲಿಯನ್ನು ತೆಗೆಸಿದರು.

ತಾಲ್ಲೂಕಿನ ತಲ್ತರೆಶೆಟ್ಟಳ್ಳಿ ಗ್ರಾಮದ ಸ.ನಂ.18/9 118/12, ಶುಂಠಿ ಗ್ರಾಮದ ಸ.ನಂ.20/28 ಅಬ್ಬೂರುಕಟ್ಟೆ ಹಿತ್ತಲುಮಕ್ಕಿ ಗ್ರಾಮದ ಸ.ನಂ.8/13, ತಾಕೇರಿ ಗ್ರಾಮದ ಸ.ನಂ.1/4 ಬಸವನಕೊಪ್ಪ ಗ್ರಾಮದ ಸ.ನಂ. 1/3 ಚಿಕ್ಕಬ್ಬೂರು ಗ್ರಾಮದ 3/23 ಸೇರಿದಂತೆ ಎಲ್ಲ ಗ್ರಾಮಗಳಲ್ಲೂ ಪೋಡಿ ದುರಸ್ತಿಗಾಗಿ 2018ರಿಂದಲೂ ಅರ್ಜಿ ಸಲ್ಲಿಸಲಾಗಿದೆ. ಆದರೂ ದುರಸ್ತಿ ಆಗಿಲ್ಲ. 2023 ರಲ್ಲಿ ತಾಲ್ಲೂಕು ಕಚೇರಿ ಎದುರು 2 ಬಾರಿ ಧರಣಿ ಮಾಡಲಾಗಿದೆ ಎಂದು ಧರಣಿ ನಿರತರು ದೂರಿದರು.

ಈ ಹಿಂದೆ ಧರಣಿ ನಡೆದ ಸಂದರ್ಭ ಸ್ಥಳಕ್ಕೆ ಶಾಸಕ ಡಾ.ಮಂತರ್ಗೌಡ, ಜಿಲ್ಲಾಧಿಕಾರಿಗಳು, ಉಪ ವಿಭಾಗಾಧಿಕಾರಿಗಳು ಭೇಟಿ ನೀಡಿ, ಒಂದು ತಿಂಗಳ ಒಳಗೆ ಪೋಡಿ ದುರಸ್ತಿ ಮಾಡಿಕೊಡುವುದಾಗಿ ಭರವಸೆ ನೀಡಿದ್ದರು. ಆದರೆ, ಇಲ್ಲಿಯವರೆಗೂ ಯಾವುದೇ ದುರಸ್ತಿ ಆಗಿರುವುದಿಲ್ಲ ಎಂದು ಹೋರಾಟಗಾರ ಬಿ.ಪಿ.ಅನಿಲ್ ಕುಮಾರ್ ಹೇಳಿದರು.

‘ಒಂದೇ ಸರ್ವೆ ನಂಬರ್ ನಲ್ಲಿ ಕೆಲವು ಮಾತ್ರ ದುರಸ್ತಿಯಾಗುತ್ತಿದೆ. ಉಳಿದ ಜಮೀನಿನ ದುರಸ್ತಿಯಾಗುತ್ತಿಲ್ಲ. ಕಳೆದ ಇಪ್ಪತ್ತು ವರ್ಷಗಳಿಂದ ಆಗದ ಕೆಲಸವನ್ನು ಬೆಂಗಳೂರಿನ ಉದ್ಯಮಿಗಳಿಗೆ ಕೇವಲ ಮೂರು ತಿಂಗಳಲ್ಲಿ ದಾಖಲಾತಿ ಮಾಡುತ್ತಾರೆ. ಹಣ ನೀಡಿದರೆ ಮಾತ್ರ ಇಲ್ಲಿ ಕೆಲಸ ಆಗುತ್ತದೆ. ನಾವು ಲಂಚ ನೀಡಲು ನಮ್ಮಲ್ಲಿ ಕೊಳ್ಳೆ ಹೊಡೆದ ಹಣವಿಲ್ಲ. ಪರಿಹಾರ ಸಿಗದಿದ್ದರೆ ನಾವು ವಿಷ ಕುಡಿದು ಸಾಯುತ್ತೇವೆ. ನಮ್ಮ ಸಾವಿಗೆ ಕಂದಾಯ ಇಲಾಖೆಯೇ ಕಾರಣ’ ಎಂದು ಹೇಳಿದರು.

ಮುಖಂಡ ಭರತ್ ಕುಮಾರ್ ಮಾತನಾಡಿ, ಸಣ್ಣ ಹಿಡುವಳಿದಾರರಿಗಾದರೂ ಕೂಡಲೇ ಮಾಡಿಕೊಡಿ, ನಂತರ ದೊಡ್ಡ ಹಿಡುವಳಿದಾರರ ಜಮೀನಿನ ದುರಸ್ತಿ ಮಾಡಿ ಎಂದು ಒತ್ತಾಯಿಸಿದರು.

ತಹಶೀಲ್ದಾರ್ ಕೃಷ್ಣಮೂರ್ತಿ ಮಾತನಾಡಿ, 5 ಕಡತಗಳನ್ನು ಸಮಿತಿಯ ಸಭೆಯಲ್ಲಿ ಬಾಕಿ ಇಡಲಾಗಿದೆ. ಮುಂದೆ ಪರಿಶೀಲಿಸಿ ಸೂಕ್ತ ಕ್ರಮ ಜರುಗಿಸಲಾಗುವುದು. ಸದ್ಯದಲ್ಲೇ ಗೈರು ವಿಲೇ ಸಮಿತಿ ಸಭೆ ಕರೆಯಲಾಗುವುದು ಎಂದು ತಿಳಿಸಿದಾಗ, ರೈತರು ಇನ್ನೂ 24 ಗಂಟೆಯೊಳಗೆ ಸಭೆಯನ್ನು ಕರೆಯಲು ಆಗ್ರಹಿಸಿದರು.

ರೈತ ಸಮಿತಿಯ ಪದಾಧಿಕಾರಿಗಳಾದ ಜಿ.ಎಂ.ಹೂವಯ್ಯ, ಎಸ್.ಬಿ.ಭರತ್ ಕುಮಾರ್, ಕೆ.ಎಂ.ಲಕ್ಷ್ಮಣ, ಅನಂತರಾಮ್, ಕೆ.ಎಂ.ಲೋಕೇಶ್, ಕೆ.ಟಿ.ಪರಮೇಶ್, ಹಿರಿಕರ ರಮೇಶ್, ಮುಖಂಡರಾದ ನಾಪಂಡ ಮುತ್ತಪ್ಪ, ಎಸ್.ಎಂ.ಡಿಸಿಲ್ವಾ, ಮಚ್ಚಂಡ ಅಶೋಕ್ ಪಾಲ್ಗೊಂಡಿದ್ದರು. ಸ್ಥಳಕ್ಕೆ ಉಪ ವಿಭಾಗಾಧಿಕಾರಿ ನಿತಿನ ಚಕ್ಕಿಯವರು ಭೇಟಿ ನೀಡಿದ್ದರು.

ಗ್ರಾಮ ಪಂಚಾಯಿತಿ ಎದುರು ಗ್ರಾಮಸ್ಥರ ಧರಣಿ

ಶನಿವಾರಸಂತೆ: ಇಲ್ಲಿನ ಸಮೀಪದ ಹಂಡ್ಲಿ ಗ್ರಾಮ ಪಂಚಾಯಿತಿಯಲ್ಲಿ ಯಾವುದೇ ಕೆಲಸಗಳೂ ನಡೆಯುತ್ತಿಲ್ಲ, ಕಾಯಂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನೂ ನೇಮಿಸಿಲ್ಲ ಎಂದು ಸುತ್ತಮುತ್ತಲ ಗ್ರಾಮಸ್ಥರು ಪಂಚಾಯಿತಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ನಂತರ ಕೊಡಗು ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಆನಂದ್ಪ್ರಕಾಶ್ ಮೀನಾ ಅವರು ದೂರವಾಣಿ ಮೂಲಕ ಮಾತನಾಡಿ, ಕಾಯಂ ಪಿಡಿಒ ಸಂಜೆ 3 ಗಂಟೆಯೊಳಗೆ ನೇಮಿಸಲಾಗುವುದು ಎಂದು ಭರವಸೆ ನೀಡಿದ ಮೇರೆಗೆ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆಯಲಾಯಿತು.

ಸಂಜೆ ಬೇಲೂರು ಗ್ರಾಮ ಪಂಚಾಯಿತಿಯ ಗ್ರೇಡ್ ಒನ್ ಕಾರ್ಯದರ್ಶಿಯಾದ ಅಂಜನಾದೇವಿ ಅವರನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಹಂಡ್ಲಿ ಗ್ರಾಮ ಪಂಚಾಯಿತಿಗೆ ನೇಮಿಸಲಾಯಿತು.

ಪ್ರತಿಭಟನಾಕಾರರು ಸಂಜೆವರೆಗೆ ಪಂಚಾಯತಿ ಆವರಣದಲ್ಲಿ ಇದ್ದು ಪಂಚಾಯಿತಿ ಆಡಳಿತ ಅಧಿಕಾರಿ ಆಗಮಿಸಿದ ವೇಳೆಯಲ್ಲಿ ಸ್ವಾಗತಿಸಿ ಬರಮಾಡಿಕೊಂಡರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಖಂಡ ದಿಲೀಪ್ ಗುಡುಗಳಲೆ, ಶಿವಕುಮಾರ್, ಎಚ್.ಎನ್.ಸಂದೀಪ್, ಚಿದಾನಂದ್, ಮನು ಹೆಬ್ಬುಲಸೆ, ತಾಳೂರು ಸತೀಶ್, ಕಿತ್ತೂರು ಮಧು, ನಿರಂಜನ್, ಎಸ್.ಜೆ. ರವಿಕುಮಾರ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.