ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಭಯೋತ್ಪಾದನಾ ಕೃತ್ಯಗಳನ್ನು ತಡೆಯಲು ಒತ್ತಾಯಿಸಿ ಪ್ರತಿಭಟನೆ

ಜನರಲ್ ತಿಮ್ಮಯ್ಯ ವೃತ್ತದಲ್ಲಿ ಮಾನವ ಸರಪಳಿ ರಚನೆ
Published 7 ಮಾರ್ಚ್ 2024, 5:26 IST
Last Updated 7 ಮಾರ್ಚ್ 2024, 5:26 IST
ಅಕ್ಷರ ಗಾತ್ರ

ಮಡಿಕೇರಿ: ರಾಜ್ಯದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ನಿಗ್ರಹಿಸಬೇಕು ಎಂದು ಆಗ್ರಹಿಸಿ ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿಯ ಕೊಡಗು ಜಿಲ್ಲಾ ಘಟಕದ ಕಾರ್ಯಕರ್ತರು ಇಲ್ಲಿನ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನಲ್ಲಿ ನಡೆದ ಘಟನೆಗಳನ್ನು ಖಂಡಿಸಿದ ಕಾರ್ಯಕರ್ತರು ರಾಜ್ಯ ವಿಧಾನಸಭೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ ಎಲ್ಲ ಆರೋಪಿಗಳನ್ನು ಬಂಧಿಸಿ, ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು ಹಾಗೂ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ಆರೋಪಿಯನ್ನು ಕೂಡಲೆ ಬಂಧಿಸಬೇಕು ಎಂದು ಅವರು ಒತ್ತಾಯಿಸಿದರು.

ಬಿಜೆ‍ಪಿಯ ಹಿರಿಯ ಮುಖಂಡರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚುರಂಜನ್ ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯಲ್ಲಿದ್ದರು.

ವಿಧೇಯಕ ರದ್ಧತಿಗೆ ಆಗ್ರಹ

ಕರ್ನಾಟಕ ದೇವಸ್ಥಾನ ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾ ಸಂಘದ ಸದಸ್ಯರು ಕರ್ನಾಟಕ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ 2024ನ್ನು ರದ್ದು ಮಾಡಲು ಆಗ್ರಹಿಸಿ ಇಲ್ಲಿನ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರವು ಫೆ. 20ರಂದು ಕರ್ನಾಟಕ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997ಕ್ಕೆ ಅನೇಕ ತಿದ್ದುಪಡಿಗಳನ್ನು ಮಾಡಿದೆ. ಇದು ಹಲವು ದೋಷಗಳಿಂದ ಕೂಡಿದ್ದು, ದೇವಸ್ಥಾನಗಳ ಪರಂಪರೆಯ ರಕ್ಷಣೆಯ ದೃಷ್ಟಿಯಿಂದ ಅತ್ಯಂತ ಅಪಾಯಕಾರಿಯಾಗಿದೆ ಎಂದು ಅವರು ಖಂಡಿಸಿದರು.

ರಾಜ್ಯದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ನಿಗ್ರಹಿಸಬೇಕು ಎಂದು ಆಗ್ರಹಿಸಿ ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿಯ ಕೊಡಗು ಜಿಲ್ಲಾ ಘಟಕದ ಕಾರ್ಯಕರ್ತರು ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ನಿಗ್ರಹಿಸಬೇಕು ಎಂದು ಆಗ್ರಹಿಸಿ ಭಯೋತ್ಪಾದನಾ ವಿರೋಧಿ ಹೋರಾಟ ಸಮಿತಿಯ ಕೊಡಗು ಜಿಲ್ಲಾ ಘಟಕದ ಕಾರ್ಯಕರ್ತರು ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT