ಸೋಮವಾರ, 5 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ: ಬಂಧನಕ್ಕೆ ಒತ್ತಾಯಿಸಿ ರಸ್ತೆ ತಡೆ

Last Updated 21 ಮಾರ್ಚ್ 2023, 4:16 IST
ಅಕ್ಷರ ಗಾತ್ರ

ಗೋಣಿಕೊಪ್ಪಲು: ಪಟ್ಟಣದಲ್ಲಿ ಈಚಿಗೆ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ಮಾಡಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ಕೃಷ್ಣಪ್ಪ ಬೆಳ್ಳೂರು ಅವರ ನೇತೃತ್ವದಲ್ಲಿ ಸೋಮವಾರ ತಿತಿಮತಿಯಲ್ಲಿ ರಸ್ತೆ ತಡೆ ನಡೆಸಲಾಯಿತು.

‘ಸುಮಾರು ಒಂದು ಗಂ ನಡೆದ ಪ್ರತಿಭಟನೆಯಲ್ಲಿ ದಲಿತ ಸಂಘರ್ಷ ಸಮಿತಿಯ ನೂರಾರು ಕಾರ್ಯಕರ್ತರು ಹಾಗೂ ಪ್ರಗತಿಪರ ಹೋರಾಟಗಾರರು ಬಿಜೆಪಿ ಸರ್ಕಾರ ದಲಿತ ವಿರೋಧಿ ನೀತಿ ತಾಳಿದ್ದು ದಲಿತರ ದಮನ ನೀತಿ ಅನುಸರಿಸುತ್ತಿದೆ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನ ಗೊಳಿಸಿದ್ದರೂ ಆ ಪಕ್ಷದ ಕಾರ್ಯಕರ್ತರು ಹಾಗೂ ನಾಯಕರು ಈ ಬಗ್ಗೆ ಕಿಂಚಿತ್ತೂ ವಿಷಾದ ವ್ಯಕ್ತಪಡಿಸುತ್ತಿಲ್ಲ’ ಎಂದು ಹೋರಾಟಗಾರರಾದ ಕೃಷ್ಣಪ್ಪ ದೂರಿದರು.

‘ಸಂವಿಧಾನಾತ್ಮಕವಾಗಿ ಲಭಿಸಿದ್ದ ದಲಿತರ ವಿವಿಧ ಸವಲತ್ತುಗಳನ್ನು ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರ ಕಸಿದುಕೊಳ್ಳುತ್ತಿದೆ. ಇದರ ವಿರುದ್ಧ ಸಂಘಟನಾತ್ಮಕ ಹೋರಾಟ ನಡೆಸದಿದ್ದರೆ ದಲಿತರ ಮತ್ತು ಅಲ್ಪಸಂಖ್ಯಾತರ ಬದುಕು ಶೋಚನೀಯವಾಗಲಿದೆ. ದಲಿತರ ವಿರೋಧಿ ಬಿಜೆಪಿ ವಿರುದ್ಧ ಎಲ್ಲ ದಲಿತ ನಾಯಕರು, ಪ್ರಗತಿಪರ ಚಿಂತಕರು ಒಕ್ಕೊರಲಿನಿಂದ ಹೋರಾಟ ನಡುಸುವುದು ಅನಿವಾರ್ಯವಾಗಿದೆ’ ಎಂದು ಹೇಳಿದರು.

ಸ್ಥಳಕ್ಕೆ ಬಂದ ತಹಶೀಲ್ದಾರ್ ಎನ್.ಎಸ್.ಪ್ರಶಾಂತ್ ಮನವಿ ಪತ್ರ ಸ್ವೀಕರಿಸಿದ ನಂತರ ರಸ್ತೆ ತಡೆ ಹಿಂದಕ್ಕೆ ಪಡೆಯಲಾಯಿತು.

ಮಹಿಳಾ ಮತ್ತು ಮಕ್ಕಳ ಸಂರಕ್ಷಣಾ ಸಮಿತಿ ಜಿಲ್ಲಾಧ್ಯಕ್ಷೆ ಪಡಿಕಲ್ ಕುಸುಮಾವತಿ, ರಜನಿ, ಸಾಮಾಜಿಕ ಹೋರಾಟಗಾರ ಅಬ್ದುಲ್ ರೆಹಮಾನ್ ಬಾಪು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT