ಸೋಮವಾರ, ಡಿಸೆಂಬರ್ 9, 2019
20 °C
ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಬೆಂಬಲ

25ರಂದು ಮಡಿಕೇರಿಯಲ್ಲಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಡಿಕೇರಿ: 'ಡಾ.ಬಿ.ಆರ್. ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚಿಸಿಲ್ಲ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿದ ಪ್ರಕಟಣೆ ಖಂಡಿಸಿ ಮಡಿಕೇರಿಯಲ್ಲಿ ಡಿ.25ರಂದು ಸಂವಿಧಾನ ರಕ್ಷಣೆ ಹೋರಾಟ ಸಮಿತಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ನೀಡಲಾಗುವುದು ಎಂದು ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾ ಅಧ್ಯಕ್ಷ ಕೆ.ಬಿ.ರಾಜು ತಿಳಿಸಿದರು.

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಂದು ಬೆಳಿಗ್ಗೆ ಅಂಬೇಡ್ಕರ್ ಭವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ ಎಂದು ತಿಳಿಸಿದರು.

ಅಂಬೇಡ್ಕರ್‌ ಅವರು ಎಲ್ಲಾ ಜಾತಿ ಧರ್ಮಕ್ಕೂ ಸಮಾನತೆಯನ್ನು ಸಾರುವ ಸಂವಿಧಾನವನ್ನು ರಚಿಸಿದ್ದಾರೆ. ಈ ಸಂವಿಧಾನ ಸ್ವಾತಂತ್ರ್ಯ, ಸಮಾನತೆ, ಸಹೋದರತೆಯನ್ನು ಎತ್ತಿ ಹಿಡಿದಿದೆ. ಇಂತಹ ಪ್ರಜಾಪ್ರಭುತ್ವ ಹೊಂದಿದ ಸಂವಿಧಾನದ ಮೇಲೆ ಹಲವು ಕಿಡಿಗೇಡಿ ಮನುವಾದಿಗಳು, ಸಂವಿಧಾನ ಸರಿಯಿಲ್ಲ. ಸಂವಿಧಾನವನ್ನು ಬದಲಾವಣೆ ಮಾಡಬೇಕು ಎನ್ನುವ ಹೇಳಿಕೆ ನೀಡುತ್ತಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವೀಂದ್ರನಾಥ್ ಹೆಬ್ಬಾಲೆ, ಪ್ರಮುಖರಾದ ಎಂ.ಡಿ.ಲತಾ, ಕೆ.ಜೆ.ಸಾವಿತ್ರಮ್ಮ, ವೀಣಾ ಉಪಸ್ಥಿತರಿದ್ದರು.

ಪ್ರತಿಕ್ರಿಯಿಸಿ (+)